ಸಾರಾಂಶ
ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗಟ್ಟಿದ್ದಾರೆ. ಬೀಡು ಬಿಟ್ಟಿದ್ದ ಕಾಡಾನೆಗಳು ಕೃಷಿ ಫಸಲು ನಾಶಪಡಿಸುತ್ತಿದೆ.
ಕನ್ನಡಪ್ರಭ ವಾರ್ತೆ ಸಿದ್ದಾಪುರ
ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಕೃಷಿ ಫಸಲು ನಾಶ ಮಾಡಿ ಕಾರ್ಮಿಕರು ಹಾಗೂ ಬೆಳೆಗಾರರಲ್ಲಿ ಆತಂಕ ಸೃಷ್ಟಿಸುತ್ತಿದ್ದ ಕಾಡಾನೆಗಳನ್ನು ಅರಣ್ಯ ಇಲಾಖಾ ಸಿಬ್ಬಂದಿ ಕಾಡಿಗಟ್ಟಿದ್ದಾರೆ.ಇತ್ತೀಚೆಗೆ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳು ಕೃಷಿ ಫಸಲುಗಳನ್ನು ನಾಶ ಮಾಡುತ್ತಿದೆ. ಗ್ರಾಮ ವ್ಯಾಪ್ತಿಯಲ್ಲಿ ಮತ್ತು ತೋಟಗಳಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ಹಾಗೂ ಶಾಲಾ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಡಾನೆಗಳನ್ನು ಕಾಡಿಗಟ್ಟಬೇಕೆಂದು ಸ್ಥಳೀಯರು ಒತ್ತಾಯಿಸಿದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಬಾಡಗ ಬಾಣಂಗಾಲ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾರ್ಯಾಚರಣೆ ನಡೆಸಿ ಮೂರು ಮರಿಯೊಂದಿಗೆ ಸುಮಾರು 9 ಕಾಡಾನೆಗಳನ್ನು ಮಾರ್ಗೊಳ್ಳಿ ಘಟ್ಟತಳ ಮಾರ್ಗವಾಗಿ ದುಬಾರೆ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ನಿರ್ದೇಶನದ ಮೇರೆಗೆ ವಲಯ ಅರಣ್ಯಾಧಿಕಾರಿ ಗಂಗಾಧರ್ ಅವರ ನೇತೃತ್ವದಲ್ಲಿ ಚೆನ್ನಂಗಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ ಶಶಿ ಪಿಟಿ, ಇಟಿಎಪ್ ಉಪ ವಲಯ ಅರಣ್ಯಾಧಿಕಾರಿ ದೇವರಾಜ್, ದುಬಾರೆ ಉಪವಲಯರಣ್ಯಾಧಿಕಾರಿ ರಂಜನ್ ಕೆ ಪಿ , ಗಸ್ತು ಅರಣ್ಯ ಪಾಲಕ ರಾಜೇಶ್, ಆರ್ ಆರ್ ಟಿ ಹಾಗೂ ಇ ಟಿ ಎಫ್ ಸಿಬ್ಬಂದಿ ಶಂಕರ, ಭರತ್, ರಂಜಿತ್, ರೋಶನ್, ಪ್ರದೀಪ್, ಮುತ್ತಣ್ಣ, ಸುಂದರ, ದಿನು, ಧನು, ಸಚಿನ್, ಪೊನ್ನಣ್ಣ, ಕೃಷ್ಣಪ್ಪ, ಸಂಜು, ಶಿವು ಚಾಲಕರಾದ ಗಗನ್, ರೋಹಿತ್ ಮತ್ತು ಪೊಲೀಸ್ ಸಿಬ್ಬಂದಿ, ವನ್ಯಜೀವಿ ವಲಯದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.