ಅಬಕಾರಿ ಇಲಾಖೆ ವಿರುದ್ಧ ವಿರೋಧ ಪಕ್ಷದ ನಾಯಕರು ಮಾಡುತ್ತಿರುವ ಆರೋಪಗಳಿಗೆ ವಿಧಾನಮಂಡಲ ಅಧಿವೇಶನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಅಬಕಾರಿ ಇಲಾಖೆ ವಿರುದ್ಧ ವಿರೋಧ ಪಕ್ಷದ ನಾಯಕರು ಮಾಡುತ್ತಿರುವ ಆರೋಪಗಳಿಗೆ ವಿಧಾನಮಂಡಲ ಅಧಿವೇಶನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ವಿಜಯೇಂದ್ರ ಆರೋಪ ಮಾಡುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿಯೂ ಆರೋಪ ಕೇಳಿ ಬಂದಿತ್ತು. ಆಗ ಏನು ಮಾಡಿದರು? ರಾಜೀನಾಮೆ ನೀಡಿದ್ದರೇ?'''''''' ಎಂದು ಪ್ರಶ್ನಿಸಿದ ಅವರು, ಇಲಾಖೆ ಬಗ್ಗೆ ಕೆಲವರಿಗೆ ಆರೋಪ ಮಾಡುವ ನಶೆ ಏರಿದೆ. ನಶೆ ಇಳಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಜಿಲ್ಲೆಯ ಯುವಕರಿಗೆ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಕೈಗಾರಿಕೆ ಆರಂಭಿಸುವ ಬಗ್ಗೆ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ಜಲಗೇರಿ ಬಳಿ 400 ಎಕರೆ ಗುರುತಿಸಲಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಶಂಕುಸ್ಥಾಪನೆ ಮಾಡಲಾಗುವುದು. ಯುಕೆಪಿಯಡಿ ಮುಳುಗಡೆಯಾಗುವ ಭೂಮಿಗೆ ನೀರಾವರಿ ಜಮೀನಿಗೆ ಎಕರೆಗೆ ₹40 ಲಕ್ಷ, ಖುಷ್ಕಿ ಭೂಮಿಗೆ ₹30 ಲಕ್ಷ ನೀಡಲು ನಿರ್ಧರಿಸಲಾಗಿದೆ. ಶಂಕುಸ್ಥಾಪನೆ ಸಂದರ್ಭದಲ್ಲಿಯೇ ರೈತರಿಗೆ ₹400 ಕೋಟಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.ಹಸಿವುಮುಕ್ತ ರಾಷ್ಟ್ರ ನಿರ್ಮಾಣ ಆಗಿದೆ. ಧರ್ಮ, ಜಾತಿ ದಳ್ಳುರಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇವುಗಳಿಗೆ ಕಡಿವಾಣ ಹಾಕದಿದ್ದರೆ, ದೇಶ ಬೇರೆ ದಿಕ್ಕಿಗೆ ಹೋಗುವ ಅಪಾಯವಿದೆ ಎಂದು ಎಚ್ಚರಿಸಿದರು.