ಕನ್ನಡಪ್ರಭ ವಾರ್ತೆ ಮಾಲೂರು
ಕಳೆದ ಬಾರಿ ಗೆಲ್ಲುವಿನ ಹತ್ತಿರ ಬಂದು ಚುನಾವಣೆಯಲ್ಲಿ ಸೋಲಲು ನಾನು ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಆಗದಿರುವುದು. ತಾಲೂಕಿನಲ್ಲಿ ನನ್ನ ಬೆಂಬಲಿಗರನ್ನು ರಾಜಕೀಯವಾಗಿ ಕಾಪಾಡಬೇಕಾದರೆ ರಾಜ್ಯ ಮಟ್ಟದ ಪಕ್ಷದ ಅನಿರ್ವಾಯವಾಗಿದ್ದು, ನನ್ನ ರಾಜಕೀಯ ಬೆಳೆವಣಿಗೆಗೆ ಕಾರಣರಾದ ನೀವು ಒಪ್ಪಿಗೆ ನೀಡಿದಲ್ಲಿ ಜೆಡಿಎಸ್ ಪಕ್ಷ ಸೇರಲಿದ್ದೇನಿ ಎಂದು ಎಸ್‌ಜೆಪಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಹೂಡಿ ವಿಜಯಕುಮಾರ್ ಹೇಳಿದರು.ಅವರು ಇಲ್ಲಿನ ಹೊಸಕೋಟೆ ರಸ್ತೆಯ ಚೊಕ್ಕಂಡಹಳ್ಳಿ ಗೇಟ್ ನಲ್ಲಿರುವ ಎಸ್‌ಜೆಪಿ ಕಚೇರಿಯಲ್ಲಿ ಸ್ವಾಭಿಮಾನಿ ಜನತಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜೆಲ್ಲೆಯ ಶ್ರೀನಿವಾಸಪುರ ದಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಕೋಲಾರ ಹಾಗೂ ಮುಳಬಾಗಿಲಿನಲ್ಲಿ ಜೆಡಿಎಸ್‌ಗೆ ಟಿಕೆಟ್ ನೀಡಲಿದ್ದಾರೆ. ಮಾಲೂರು ತಾಲೂಕಿನಲ್ಲಿ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡುವ ಬಗ್ಗೆ ಜೆಡಿಎಸ್ ಪಕ್ಷದ ವರಿಷ್ಠರು ಮಾತು ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಬಹಳ ಮುಖ್ಯ ಎಂದರು.
ತಾಲೂಕಿನಲ್ಲಿ ಕಳೆದ 1 ತಿಂಗಳಿಂದ ರಾಜಕೀಯವಾಗಿ ಬಹಳ ಚರ್ಚೆಗಳು ನಡೆಯುತ್ತಿವೆ. ಜೆಡಿಎಸ್ ಸೇರ್ಪಡೆಯಾಗುವ ವಿಚಾರದಲ್ಲಿ ನಮ್ಮ ಸ್ವಾಭಿಮಾನಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯಪಡೆಯವ ನಿಟ್ಟಿನಲ್ಲಿ ಈ ಸಭೆಯನ್ನು ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಭಾಗವಹಿಸಿ ತಮಗೆ ಬೆಂಬಲ ನೀಡುತ್ತಿರುವುದು ಒಳ್ಳೇಯ ಬೆಳವಣಿಗೆಯಾಗಿದೆ. ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಗುರ್ತಿಸಿಕೊಂಡು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಹಕಾರದಿಂದ ತಾಲೂಕಿನಲ್ಲಿ ಬಿಜೆಪಿ ಪಕ್ಷವನ್ನು ಸಂಘಟನೆ ಮಾಡಲಾಗಿತ್ತು.ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ. ಚುನಾವಣೆಯ ಕೊನೆಯ ಹಂತದಲ್ಲಿ ಪಕ್ಷದ ವರಿಷ್ಠರು ನನಗೆ ಟಿಕೆಟ್ ತಪ್ಪಿಸಿ ಬೇರೆಯವರಿಗೆ ನೀಡಿದ ಹಿನ್ನೆಲೆಯಲ್ಲಿ ನಮ್ಮ ಮುಖಂಡರ ತೀರ್ಮಾನದಂತೆ ಸ್ವಾಭಿಮಾನಿ ಜನತಾ ಪಕ್ಷದ ಪಕ್ಷೇತೆರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಕಡಿಮೆ ಅವಧಿಯಲ್ಲಿ ತಾಲೂಕಿನ ಜನತೆ ತಮಗೆ 50 ಸಾವಿರ ಮತಗಳನ್ನು ನೀಡಿದ್ದರು. ನಾನು ಚುನಾವಣೆಯಲ್ಲಿ ಸೋತಿರಬಹುದು. ಆದರೆ, ಜನರ ಮನಸ್ಸಿನಲ್ಲಿ ಗೆಲ್ಲಿಸಿದ್ದಾರೆ. ಚುನಾವಣೆಯಲ್ಲಿ ಬೇರೆಯವರು ಗೆದ್ದಿರಬಹುದು, ಆದರೆ, ಜನರ ಮನಸ್ಸಿನಲ್ಲಿ ನಾನು ಗೆದ್ದಿದ್ದೇನೆ ಎಂದರು.
ಚುನಾವಣೆ ಮುಗಿದು 2 ವರ್ಷಗಳೇ ಕಳೆದರೂ ನಮ್ಮ ಪಕ್ಷದ ಕಾರ್ಯಕರ್ತರು ಇಂದಿಗೂ ನಮ್ಮೊಂದಿಗೆ ಇದ್ದು, ನನಗೆ ನೈತಿಕ ಬೆಂಬಲ ನೀಡುವುದರ ಜತೆಗೆ ನಮ್ಮ ತೀರ್ಮಾನಗಳಿಗೆ ಕೈಜೋಡಿಸಿದ್ದಾರೆ. ಚುನಾವಣೆ ಅಂದ ಮೇಲೆ ಸೋಲು, ಗೆಲುವು ಇದ್ದೆ ಇರುತ್ತದೆ. ನಾನು ಸೋತರೂ ಸಹ ಪ್ರತಿನಿತ್ಯ ಜನರೊಂದಿಗೆ ಬೇರೆಯುತ್ತಿದ್ದೇನೆ. ನನಗಾರುವ ಅನ್ಯಾಯಕ್ಕೆ ತಾಲೂಕಿನ ಜನತೆ ನನ್ನದೊಂದಿಗೆ ಬಂದಿದ್ದೀರಿ. ಯಾವುದೇ ಕಾರಣಕ್ಕೂ ನಾನು ನಮ್ಮ ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೇಯೇ ಇಲ್ಲ. ಚುನಾವಣೆಗೆ ಇನ್ನೂ 2 ವರ್ಷ ಇದೆ. ಮುಂದಿನ ದಿನಗಳಲ್ಲಿ ಗ್ರಾಪಂ, ತಾಪಂ, ಜಿಪಂ, ನಗರಸಭೆ ಸೇರಿದಂತೆ ಇನ್ನಿತರೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಮ್ಮ ಪಕ್ಷದ ಕಾರ್ಯಕರ್ತರು ಯಾವ ಕಡೆಯಿಂದ ನಿಲ್ಲಬೇಕು ಎನ್ನುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದರು.ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್‌ಬಾಬು ಅವರ ಪರವಾಗಿ ಕೆಲಸ ಮಾಡುವಂತೆ ಜೆಡಿಎಸ್ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇನ್ನಿತರೆ ಮುಖಂಡರ ಒಮ್ಮತದ ತೀರ್ಮಾನದಂತೆ ನಮ್ಮ ಪಕ್ಷದ ಕಾರ‍್ಯಕರ್ತರ ಸಹಕಾರದಿಂದ ಮಲ್ಲೇಶ್ ಬಾಬು ಅವರ ಪರವಾಗಿ ಕೆಲಸ ಮಾಡಿ ಅವರನ್ನು ಗೆಲ್ಲಿಸಲಾಗಿತ್ತು. ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ನಮ್ಮ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಒಮ್ಮತವಾಗಿ ಒಪ್ಪಿಗೆ ನೀಡಿದರೆ ಮಾತ್ರ ಜೆಡಿಎಸ್‌ಗೆ ಸೇರ್ಪಡೆಯಾಗುತ್ತೇನೆ. ನಿಮ್ಮ ಒಪ್ಪಿಗೆ ಬಹಳ ಮುಖ್ಯ ಎಂದರು.
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು, ಶ್ರೀನಿವಾಸಪುರದಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಕೋಲಾರ ಹಾಗೂ ಮುಳಬಾಗಿಲಿನಲ್ಲಿ ಜೆಡಿಎಸ್‌ಗೆ ನೀಡಲಿದ್ದಾರೆ. ಮಾಲೂರು ತಾಲೂಕಿನಲ್ಲಿ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡುವ ಬಗ್ಗೆ ಮಾತು ಕೊಟ್ಟಿದ್ದಾರೆ. ನಾವೇಲ್ಲರೂ ಬೆಂಗಳೂರಿಗೆ ಹೋಗಿ ಕುಮಾರಸ್ವಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗೋಣ. ಗ್ರಾಮಗಳಲ್ಲಿ ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಿರುವವರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಸ್ವಾಭಿಮಾನಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.