ಸಾರಾಂಶ
ದಾಬಸ್‌ಪೇಟೆ: ಇಡೀ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಈಗಾಗಲೇ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದೇನೆ. ಹಂತಹಂತವಾಗಿ ಪ್ರತಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವ ತಂದು ಮತದಾರರ ಋಣ ತೀರಿಸುತ್ತೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ತ್ಯಾಮಗೊಂಡ್ಲು ಹೋಬಳಿಯ ಓಬಳಾಪುರದಲ್ಲಿ ರಸ್ತೆ ಮತ್ತು ಗ್ರಂಥಾಲಯ ಕಟ್ಟಡ, ತಡಸೀಘಟ್ಟ ಗ್ರಾಮಕ್ಕೆ 50 ಲಕ್ಷ ರು. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಓಬಳಾಪುರ ಗ್ರಾಮಕ್ಕೆ 2 ಕೋಟಿ ಅನುದಾನದಲ್ಲಿ ಶಾಲೆ ಅಂಗಳದಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ ಹಾಗೂ ಗ್ರಂಥಾಲಯ ಕಾಮಗಾರಿ ಆರಂಭವಾಗಲಿದೆ. ಮುಂದಿನ ವಾರದಲ್ಲಿ ಹೆದ್ದಾರಿಯಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಂಬರೀಕರಣಕ್ಕೆ ಚಾಲನೆ ನೀಡುವುದಾಗಿ ಹೇಳಿದರು.ವಕೀಲ ಹನುಮಂತೇಗೌಡ ಮಾತನಾಡಿ, ಗ್ರಾಮದಿಂದ ನೂರಾರು ವಿದ್ಯಾರ್ಥಿಗಳು ತುಮಕೂರು ಮತ್ತು ಬೆಂಗಳೂರಿಗೆ ವಿದ್ಯಾಭ್ಯಾಸಕ್ಕೆ ತೆರಳುತ್ತಿದ್ದು ಬಸ್ಸುಗಳಿಲ್ಲದೇ ಪರದಾಡುವ ಸ್ಥಿತಿ ಇದೆ. ಗ್ರಾಮದಲ್ಲಿ ಪಶು ಆಸ್ಪತ್ರೆ ಹಾಗೂ ಪ್ರಾಥಮಿಕ ಚಿಕಿತ್ಸಾ ಕೇಂದ್ರ ನಿರ್ಮಿಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್, ಎನ್‌ಡಿಎ ಸದಸ್ಯ ಪ್ರಕಾಶ್ ಬಾಬು, ಗ್ರಾಪಂ ಅಧ್ಯಕ್ಷ ಅಂಜನಮೂರ್ತಿ, ಸದಸ್ಯರಾದ ಸೋಮಶೇಖರ್, ಶ್ರೀಧರ್, ಕಾವ್ಯ ಇತರರಿದ್ದರು.ಪೋಟೋ 6 :
ತ್ಯಾಮಗೊಂಡ್ಲು ಹೋಬಳಿಯ ಓಬಳಾಪುರದ ಕಾಂಕ್ರೀಟ್ ರಸ್ತೆ ಮತ್ತು ಗ್ರಂಥಾಲಯ ಕಟ್ಟಡ ಹಾಗೂ ತಡಶೀಗಟ್ಟ ಗ್ರಾಮಕ್ಕೆ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಶ್ರೀನಿವಾಸ್ ಭೂಮಿಪೂಜೆ ನೆರವೇರಿಸಿದರು.