ರಾಯಚೂರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಕುಮಾರ ನಾಯಕ

| Published : Mar 31 2024, 02:02 AM IST

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಕಾಂಗ್ರೆಸ್ ನನಗೆ ರಾಯಚೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ವಿಶೇಷ ಅವಕಾಶ ಕಲ್ಪಿಸುವ ಮೂಲಕ ಗುರುತರ ಜವಾಬ್ದಾರಿ ನೀಡಿದ್ದು, ಅವಕಾಶ ಕಲ್ಪಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಅಭ್ಯರ್ಥಿ ಜಿ.ಕುಮಾರ ನಾಯಕ ಹೇಳಿದರು.

ಸ್ಥಳೀಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಶನಿವಾರ ಮಾತನಾಡಿದ ಅವರು, ಇಲ್ಲಿಯೇ ಡಿಸಿಯಾಗಿ ಕೆಲಸ ಮಾಡಿದ್ದು, ಸರ್ಕಾರದ ಅನೇಕ ಇಲಾಖೆಗಳಲ್ಲಿಯೂ ಸೇವೆ ಸಲ್ಲಿಸಿದ್ದೇನೆ. ನಿರಂತರವಾಗಿ ಜಿಲ್ಲೆಯೊಂದಿಗೆ ಅವಿನಾಭಾವ ಬಾಂಧವ್ಯ ಹೊಂದಿರುವ ನನಗೆ ಇಲ್ಲಿನ ಜನರ ಸಮಸ್ಯೆಗಳು ಗೊತ್ತಿದ್ದು, ಅವುಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಕೋರಿದರು.

ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಮಾತನಾಡಿ, ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ. ಅಲ್ಲದೇ ಜಿಲ್ಲೆಯ ಅಭಿವೃದ್ಧಿಯು ಬಗ್ಗೆ ಸಾಕಷ್ಟು ಕಳಕಳಿ ಹೊಂದಿದ್ದಾರೆ. ಈ ಹಿನ್ನೆಲೆ ಅವರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌ನ್ನು ಸದೃಢಗೊಳಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತ ಕುಮಾರ, ಮಾಜಿ ಶಾಸಕ ಸೈಯದ್‌ ಯಾಸೀನ್‌, ಮುಖಂಡ ಕೆ.ಶಾಂತಪ್ಪ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಶರಣಗೌಡ ಬಯ್ಯಾಪುರ, ಮಾಜಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ, ಮುಖಂಡರಾದ ಮಹಮ್ಮದ್ ಶಾಲಂ, ಜಯಣ್ಣ, ಬಷಿರುದ್ದೀನ್, ನರಸಿಂಹಲು, ರುದ್ರಪ್ಪ ಅಂಗಡಿ, ಜಯಣ್ಣ, ಜಿ.ಬಸವರಾಜರೆಡ್ಡಿ, ಅಮರೇಗೌಡ ಹಂಚಿನಾಳ ಸೇರಿ ಅನೇಕರು ಇದ್ದರು.