ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ಮನ್ಮುಲ್ ಚುನಾವಣೆಯಲ್ಲಿ ಅಧಿಕ ಮತಕೊಟ್ಟು ಗೆಲ್ಲಿಸುವ ಮೂಲಕ ಜವಾಬ್ದಾರಿ ಹೆಚ್ಚಿಸಿದ್ದೀರಿ. ನಿಮ್ಮ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ ಎಂದು ನೂತನ ನಿರ್ದೇಶಕ ಸಿ.ಶಿವಕುಮಾರ್ ಹೇಳಿದರು.ತಾಲೂಕಿನ ಬೇಬಿಗ್ರಾಮದಲ್ಲಿ ಹೊನ್ನಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರು, ಡೇರಿ ನಿರ್ದೇಶಕರು, ಗ್ರಾಪಂ ಸದಸ್ಯರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಅಭಿನಂದನೆ ಸಲ್ಲಿಸುವ ಮೂಲಕ ಎಲ್ಲರು ಸೇರಿ ನನ್ನ ಜವಾಬ್ದಾರಿಯನ್ನು ಹೆಚ್ಚುಮಾಡಿದ್ದೀರಾ. ನನ್ನ ಅಧಿಕಾರ ಅವಧಿಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಪೂಕರವಾಗಿ ಕೆಲಸ ಮಾಡುವ ಜತೆಗೆ, ಒಕ್ಕೂಟದಿಂದ ಉತ್ಪಾದಕರಿಗೆ ದೊರೆಯುವ ಸೌಲತ್ತು ಒದಗಿಸಿಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.ಡೇರಿಗಳು ದೇವಸ್ಥಾನಗಳು ಇದ್ದಂತೆ. ಇಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ತರಬಾರದು, ಆಡಳಿತ ಮಂಡಳಿ, ನೌಕರರು ಹಾಗೂ ಉತ್ಪಾದಕರು ಜತೆಗೆ ಗೂಡಿ ಕೆಲಸ ಮಾಡಿದರೆ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ನನ್ನ ಚಿಕ್ಕಪ್ಪ ಸಿ.ಎಸ್.ಪುಟ್ಟರಾಜು ಅವರು ಮೂರು ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರು, ಸಚಿವರಾಗಿ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಮಾರ್ಗದರ್ಶನದಲ್ಲಿ ಹೈನುಗಾರಿಕೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವ ಜತೆಗೆ, ಯುವ ಸಮುದಾಯ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತೇನೆ ಎಂದರು.ವಿಎಸ್‌ಎಸ್‌ಎನ್‌ಬಿ ಅಧ್ಯಕ್ಷ ಸಿ.ಎಸ್.ಗೋಪಾಲಗೌಡ ಮಾತನಾಡಿ, ಸಿ.ಶಿವಕುಮಾರ್ ಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಹೈನುಗಾರಿಕೆಗೆ ಉತ್ತೇಜನೆ ಕೊಟ್ಟು ಕೆಲಸ ಮಾಡಲಿದ್ದಾರೆ ಎಂದರು.
ಈ ವೇಳೆ ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್, ಚಿನಕುರಳಿ ವಿಎಸ್ ಎಸ್ ಎನ್ ಬಿ ಅಧ್ಯಕ್ಷ ಸಿ.ಎಸ್.ಗೋಪಾಲಗೌಡ ಸೇರಿದಂತೆ ವಿಎಸ್‌ಎಸ್‌ಎನ್‌ಬಿ, ಡೇರಿ ನಿರ್ದೇಶಕರು ಹಾಗೂ ಗ್ರಾಪಂ ಸದಸ್ಯರನ್ನು ಅಭಿನಂಧಿಸಿದರು.ಕಾರ್ಯಕ್ರಮದಲ್ಲಿ ಡೇರಿ ಅಧ್ಯಕ್ಷೆ ದ್ರಾಕ್ಷಾಯಿಣಿ, ಜೆಡಿಎಸ್ ಅಧ್ಯಕ್ಷ. ಎಸ್.ಎ.ಮಲ್ಲೇಶ್, ಟಿಎಪಿಸಿಎಂಎಸ್ ನಿರ್ದೇಶಕ ರಾಮಕೃಷ್ಣೇಗೌಡ, ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಸ್.ಆನಂದ್, ತಾಲೂಕು ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಜಯಣ್ಣ, ಸುರೇಂದ್ರ, ಗ್ರಾಪಂ ಅಧ್ಯಕ್ಷೆ ಪುಟ್ಟಲಿಂಗಮ್ಮ, ಮನ್ಮುಲ್ ಉಪವ್ಯವಸ್ಥಾಪಕ ಆರ್.ಪ್ರಸಾದ್, ಮಾರ್ಗವಿಸ್ತರ್ಣಾಧಿಕಾರಿ ಉಷಾ, ಶಿಂಢಭೋಗನಹಳ್ಳಿ ನಾಗಣ್ಣ, ಗ್ರಾಪಂ ಸದಸ್ಯ ಚಂದ್ರಶೇಖರಯ್ಯ, ಪಾರ್ವತಮ್ಮ, ಪುಟ್ಟಮ್ಮ, ಪದ್ಮಮ್ಮ, ಚಂದ್ರಣ್ಣ, ತಾಯಮ್ಮ, ಸಿಂಗಯ್ಯ, ಜೈಕುಮಾರ್, ಗೋವಿಂದಯ್ಯ, ಗಿರೀಶ್, ಚೈತ್ರ, ತಮ್ಮಯ್ಯ, ಕಾರ್ಯದರ್ಶಿ ಗೀತಾ ಸೇರಿದಂತೆ ಹಲವರು ಭಾಗವಹಿಸಿದ್ದರು.