ಸಾರಾಂಶ
ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಪರ ಮತಯಾಚಿಸಿದ ಶಾಸಕ
ಕನ್ನಡಪ್ರಭ ವಾರ್ತೆ ಕೊಪ್ಪಳಬಿಜೆಪಿ ಆಡಳಿತದಲ್ಲಿ ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಮತ್ತು ಸಂವಿಧಾನ ಬದಲಾಯಿಸುವ ಮಾತು ಕೇಳಿ ಬರುತ್ತಿದ್ದು, ಪ್ರಜಾಪ್ರಭುತ್ವ ರಕ್ಷಣೆಗಾಗಿ ಕಾಂಗ್ರೆಸ್ ಗೆಲ್ಲಿಸಿ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.
ಲೋಕಸಭಾ ಚುನಾವಣೆ ನಿಮಿತ್ತ ತಾಲೂಕಿನ ಹಲಗೇರಿ, ಕೋಳೂರು, ಹೀರೆಸಿಂದೋಗಿ, ಮಾದಿನೂರು, ಓಜನಹಳ್ಳಿ ಮತ್ತು ಕಲಕೇರಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಪರ ಮತಯಾಚಿಸಿ ಮಾತನಾಡಿದರು.ದೇಶದ ಭವಿಷ್ಯದ ದೃಷ್ಟಿಯಿಂದ ನಾಡಿನ ಪ್ರಜೆಗಳ ರಕ್ಷಣೆಗಾಗಿ ಅರಾಜಕತೆ ವಿರುದ್ಧ ಹೋರಾಡಲು ನಾವೆಲ್ಲರೂ ಸಿದ್ದರಾಗಬೇಕಿದೆ. ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿರುವ ಬಿಜೆಪಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕಿದೆ. ಸರ್ವಾಧಿಕಾರಿ ಆಡಳಿತವನ್ನು ಎಲ್ಲರೂ ಒಗ್ಗೂಡಿ ಕೊನೆಗಾಣಿಸಿದಾಗ ಮಾತ್ರ ಸಂವಿಧಾನದ ರಕ್ಷಣೆ ಸಾಧ್ಯ ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದ ಮೂಲಕ ಎಲ್ಲರಿಗೂ ಮತ ಚಲಾಯಿಸುವ ಅಧಿಕಾರ ನೀಡಿದ್ದಾರೆ. ಆದರೆ ಬಿಜೆಪಿಯವರು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುತ್ತಾರೆ. ಅಂಥವರು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನಕ್ಕೆ ಉಳಿಗಾಲವಿಲ್ಲ. ಒಂದೊಂದು ಮತ ದೇಶದ ಭವಿಷ್ಯವನ್ನೇ ಬದಲಾಯಿಸಲಿದೆ. ಈ ನಿಟ್ಟಿನಲ್ಲಿ ಮತದಾರರು ಎಚ್ಚೆತ್ತುಕೊಂಡು ಮೇ 7ರಂದು ಮತ ಚಲಾವಣೆ ಮಾಡಬೇಕೆಂದರು.ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಮಾತನಾಡಿ, ಲೋಕಸಭಾ ಚುನಾವಣೆ ಮಹತ್ತರವಾಗಿದ್ದು, ಬಡಜನರ, ದೀನದಲಿತರ, ಹಿಂದುಳಿದವರ ಶ್ರೇಯೋಭಿವೃದ್ಧಿಗಾಗಿ ಅನೇಕ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೇವೆ. ಕೇಂದ್ರದಲ್ಲಿ ಮತ್ತೆ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಎಲ್ಲ ಭರವಸೆ ಈಡೇರಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ಎಪಿಎಂಸಿ ಮಾಜಿ ಅಧ್ಯಕ್ಷ ಹನುಮರೆಡ್ಡಿ ಹಂಗನಕಟ್ಟಿ, ಮುಖಂಡರಾದ ವೈಜನಾಥ ದಿವಟರ್, ವೀರಣ್ಣ ಗಾಣಿಗೇರ್, ವಿರೂಪಾಕ್ಷಯ್ಯ ಗದಗಿನಮಠ, ಪ್ರಸನ್ನ ಗಡಾದ, ಶಂಕ್ರಪ್ಪ ಅಂಗಡಿ, ಕೇಶವ ರೆಡ್ಡಿ, ಗಾಳೆಪ್ಪ ಪೂಜಾರ್, ರಾಜಶೇಖರ ಆಡೂರು, ಅಮರೇಶ ಉಪಲಾಪುರ, ಪಾಲಾಕ್ಷಪ್ಪ ಗುಂಗಾಡಿ, ಗವಿಸಿದ್ದಪ್ಪ ಚಿನ್ನೂರು, ವಿರೂಪಣ್ಣ ನವೋದಯ, ತೋಟಪ್ಪ ಕಾಮನೂರು, ರಾಮಣ್ಣ ಚೌಡ್ಕಿ, ಲತಾ ಜಿ. ಚಿನ್ನೂರು, ಜ್ಯೋತಿ ಗೊಂಡಬಾಳ, ಯಲ್ಲಪ್ಪ ಮಾದಿನೂರು ಸೇರಿದಂತೆ ಇತರರಿದ್ದರು.