ಸಾರಾಂಶ
ಕನಕಪುರ: ಅಚ್ಚಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡರು ಮೈತ್ರಿ ಅಭ್ಯರ್ಥಿ ಮಂಜುನಾಥ್ ಪರ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಪರ ಬಿಜೆಪಿ ಮುಖಂಡರು ಪ್ರಚಾರ ಕೈಗೊಂಡಿದ್ದರು. ಅಚ್ಚಲು ಗ್ರಾಪಂ ವ್ಯಾಪ್ತಿಯ ಹೊಂಗಾಣಿ ದೊಡ್ಡಿ, ಹಂಚಿಪುರದ ದೊಡ್ಡಿ, ನೆಹರು ದೊಡ್ಡಿ, ವೀರೇಗೌಡನ ದೊಡ್ಡಿ, ಮೇಷ್ಟ್ರು ದೊಡ್ಡಿ, ಮಂದಣ್ಣನ ದೊಡ್ಡಿ ಸೇರಿದಂತೆ ಸುತ್ತಮುತ್ತಲು ಗ್ರಾಮಗಳಲ್ಲಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೊನ್ನಿಗನಹಳ್ಳಿ ಜಗನ್ನಾಥ್, ಬಿಜೆಪಿ ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ವೆಂಕಟೇಶ್, ಮಾಜಿ ಪ್ರಧಾನ ಕಾರ್ಯದರ್ಶಿ ಮುನಿಸಿದ್ದೇಗೌಡ ಹಾಗೂ ಬಿಜೆಪಿ ಮುಖಂಡರು ಸುತ್ತಮುತ್ತಲ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿ ಮತಯಾಚಿಸಿದರು.ಮುಖಂಡ ಮುನಿಸಿದ್ದೇಗೌಡ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ನಿರ್ದೇಶಕರಾಗಿ ತಮ್ಮ ಅವಧಿಯಲ್ಲಿ ಬಡವರು, ರೈತರು ಕಷ್ಟದಲ್ಲಿರುವ ರೋಗಿಗಳ ಚಿಕಿತ್ಸೆಗೆ ಮೊದಲ ಆದ್ಯತೆ ಕೊಟ್ಟು ಹಲವರ ಜೀವ ಉಳಿಸಿ ನೂರಾರು ಕುಟುಂಬಗಳ ಮನೆಗಳನ್ನು ದೀಪ ಬೆಳಗಿದ್ದಾರೆ. ಇಂತಹ ಸಾಮಾಜಿಕ ಕಳಕಳಿ ಇರುವ ಅಭ್ಯರ್ಥಿ ಮಂಜುನಾಥ್ ಅವರಿಗೆ ಸೇವೆ ಮಾಡುವ ಅವಕಾಶ ಕೊಡಬೇಕು ಎಂದರು.ಮೋದಿಯವರು ಕೇಂದ್ರದಲ್ಲಿ ಹತ್ತು ವರ್ಷದ ಆಡಳಿತದಲ್ಲಿ ದೇಶವನ್ನು ಸಾಕಷ್ಟು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ. ಮೋದಿಯವರು ದೇಶದ ಭದ್ರತೆ ವಿಚಾರದಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ತೆಗೆದುಕೊಂಡು ಭಾರತವನ್ನು ವಿಶ್ವ ಭೂಪಟದಲ್ಲಿ ಗುರುತಿಸುವಂತೆ ಮಾಡಿದ್ದಾರೆಂದರು.
ಕಳೆದ ಹತ್ತು ವರ್ಷದ ಆಡಳಿತದಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲದೆ ಜನಪರ ಆಡಳಿತ ಕೊಟ್ಟಿದ್ದಾರೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದ್ದು ಮೋದಿಯವರ ಸಂಪುಟದಲ್ಲಿ ಡಾ.ಮಂಜುನಾಥ್ ಅವರು ಆರೋಗ್ಯ ಮಂತ್ರಿಯಾಗಲಿದ್ದಾರೆ. ನಮ್ಮ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಹೆಚ್ಚಿನ ಅಭಿವೃದ್ಧಿಯಾಗಲಿದ್ದು ಆರೋಗ್ಯ ಕ್ಷೇತ್ರದಲ್ಲೂ ಸುಧಾರಣೆಯಾಗಲಿದೆ. ಹಾಗಾಗಿ ಡಾ. ಮಂಜುನಾಥ್ ಅವರಿಗೆ ತಮ್ಮ ಅಮೂಲ್ಯವಾದ ಮತವನ್ನು ಕೊಟ್ಟು ಮೋದಿ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.ಪ್ರಚಾರದಲ್ಲಿ ಬಿಜೆಪಿ ಮುಖಂಡ ರಮೇಶ್, ಮಾಜಿ ಉಪಾಧ್ಯಕ್ಷ ರವಿ, ಅಪ್ಪಾಜಿ, ಸಿದ್ದರಾಜು, ಮಲ್ಲೇಶ್, ಮರಿಸಿದ್ದೇಗೌಡ, ಪುಟ್ಟ ಮರಿಗೌಡ ಉಪಸ್ಥಿತರಿದ್ದರು.ಕೆ ಕೆ ಪಿ ಸುದ್ದಿ 01:
ಸಾತನುರು ಹೋಬಳಿಯ ಅಚ್ಚಲು ಗ್ರಾಪಂ ವ್ಯಾಪ್ತಿ ಯಲ್ಲಿ ಬಿಜೆಪಿ ಮುಖಂಡರು ಮನೆ ಮನೆಗೆ ತೆರಳಿ ಮತಯಾಚಿಸಿದರು.