ಡಾ.ನಾರಾಯಣ ಸ್ವಾಮಿ ಅವರನ್ನು ಗೆಲ್ಲಿಸಿ: ರವೀಂದ್ರನಾಥ್

| Published : May 25 2024, 01:30 AM IST

ಸಾರಾಂಶ

ಡಾ. ವೈ.ಎ.ನಾರಾಯಣಸ್ವಾಮಿ ಅವರನ್ನು ಈ ಬಾರಿ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ಅವರನ್ನು ಬೆಂಬಲಿಸಿದರೆ ಮುಂದೆ ಸಚಿವರಾಗಲಿದ್ದಾರೆ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಹೇಳಿದ್ದಾರೆ.

- ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಮತಯಾಚನೆ ।

- ಶಿಕ್ಷಣ ಕ್ಷೇತ್ರ, ಶಿಕ್ಷಕರ ಸಮಸ್ಯೆಗಳ ಬಗ್ಗೆ ಸಾಕಷ್ಟು ಬಾರಿ ಹೋರಾಡಿರುವ ಅನುಭವಿ - - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಡಾ. ವೈ.ಎ.ನಾರಾಯಣಸ್ವಾಮಿ ಅವರನ್ನು ಈ ಬಾರಿ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ಅವರನ್ನು ಬೆಂಬಲಿಸಿದರೆ ಮುಂದೆ ಸಚಿವರಾಗಲಿದ್ದಾರೆ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಹೇಳಿದರು.

ನಗರದ ಅನುಭವ ಮಂಟಪ ಶಾಲಾ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುಗಳಲ್ಲಿ ಗುರುವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಡಾ. ವೈ.ಎ. ನಾರಾಯಣ ಸ್ವಾಮಿ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು.

ನಾರಾಯಣಸ್ವಾಮಿ ಈ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದಿದ್ದಾರೆ. ಈ ಬಾರಿ ಸಹಾ ಅವರನ್ನು ಶಿಕ್ಷಕರು ಬೆಂಬಲಿಸಿದರೆ ಮುಂದೆ ಸಚಿವರಾಗುವರು. ಅವರು ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸಾಕಷ್ಟು ಬಾರಿ ಹೋರಾಟ ಮಾಡಿದ್ದಾರೆ. ಸಮಸ್ಯೆಗಳಿಗೆ ಪರಿಹಾರ ಕೂಡ ಕಂಡುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ನಾರಾಯಣಸ್ವಾಮಿ ಒಳ್ಳೆಯ ಬಾಂಧವ್ಯ, ಒಡನಾಟ ಹೊಂದಿದ್ದಾರೆ. ಈ ಬಾರಿ ಸಹಾ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಪಶ್ಚಿಮ ಪದವೀಧರರ ಕ್ಷೇತ್ರದ ಶಾಸಕ ರಾಧಾ ಎಸ್.ವಿ. ಸಂಕನೂರು ಮಾತನಾಡಿ. ನಾರಾಯಣ ಸ್ವಾಮಿ ಬಹಳಷ್ಟು ಅನುಭವಿ ನುರಿತವರಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವು ಕೂಡ ಜೊತೆಗೂಡಿ ಶಿಕ್ಷಕರ ಮತ್ತು ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಹೋರಾಟ ಮಾಡಿದ್ದೇವೆ ಎಂದರು.

ಈ ಸಂದರ್ಭ ಮಾಜಿ ವಿಪ ಸದಸ್ಯ ಅರುಣ ಶಹಪುರ, ಮಾಜಿ ಎಂಎಲ್‌ಸಿ ಡಾ. ಎ.ಎಚ್. ಶಿವಯೋಗಿ ಸ್ವಾಮಿ, ಮಾಜಿ ಶಾಸಕ ಬಸವರಾಜ್ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಮುಖಂಡರಾದ ಯಶವಂತ ರಾವ್ ಜಾದವ್, ಧನಂಜಯ್ ಕಡ್ಲೆಬಾಳು, ಎಚ್.ಎನ್. ಶಿವಕುಮಾರ, ಸೋಮೇಶ್ವರ ಶಾಲೆಯ ಕಾರ್ಯದರ್ಶಿ ಕೆ.ಎಂ.ಸುರೇಶ, ಎಲ್.ಎನ್. ಕಲ್ಲೇಶ್, ರಾಮರೆಡ್ಡಿ, ಸಾಂಬಶಿವಯ್ಯ ಇತರರು ಇದ್ದರು.

- - - -24ಕೆಡಿವಿಜಿ31ಃ:

ದಾವಣಗೆರೆಯ ವಿವಿಧ ಕಾಲೇಜುಗಳಲ್ಲಿ ಡಾ. ವೈ.ಎ. ನಾರಾಯಣ ಸ್ವಾಮಿ ಪರವಾಗಿ ಮಾಜಿ ಶಾಸಕ ಎಸ್.ಎ. ರವೀಂದ್ರನಾಥ ಮತಯಾಚನೆ ಮಾಡಿದರು.