ಮೋದಿ ಕೈ ಬಲಪಡಿಸಲು ಜಿಗಜಿಣಗಿ ಗೆಲ್ಲಿಸಿ

| Published : Apr 05 2024, 01:03 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಎನ್ಡಿಎ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರನ್ನು 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲು ಬಿಜೆಪಿ-ಜೆಡಿಎಸ್ನ ಕಾರ್ಯಕರ್ತರು ಶ್ರಮಿಸಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಎನ್‌ಡಿಎ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರನ್ನು 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲು ಬಿಜೆಪಿ-ಜೆಡಿಎಸ್‌ನ ಕಾರ್ಯಕರ್ತರು ಶ್ರಮಿಸಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಕರೆ ನೀಡಿದರು.

ನಗರದಲ್ಲಿ ಲೋಕಸಭಾ ಚುನಾವಣಾ ನಿಮಿತ್ತ ಗುರುವಾರ ಕಾರ್ಯಾಲಯ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿ ಕಳೆದ 10 ವರ್ಷಗಳಲ್ಲಿ ರಾಜ್ಯದ 10 ಕಡೆಗಳಲ್ಲಿ ಹೊಸ ವಿಮಾನ ನಿಲ್ದಾಣಗಳು ಅಭಿವೃದ್ಧಿಯಾಗಿವೆ. ಜಪಾನ್ ದೇಶದಲ್ಲಿ ಇದ್ದಂತ ಹೈಸ್ಪೀಡ್ ರೈಲ್ವೆ ಯೋಜನೆ ಭಾರತದಲ್ಲಿ ವಂದೇ ಭಾರತ ಎಕ್ಸ್‌ಪ್ರೆಸ್ ಹೆಸರಿನಲ್ಲಿ ಪ್ರಧಾನಿ ಮೋದಿ ಅವರ ಕಾಲದಲ್ಲಿ ಸಂಚರಿಸುತ್ತಿವೆ. ಮುಂದಿನ ದಿನಗಳಲ್ಲಿ ಜಿಗಜಿಣಗಿ ಅವರು ಸಂಸದರಾಗಿ ವಿಜಯಪುರಕ್ಕೆ ವಂದೇ ಭಾರತ ರೈಲ್ವೆ ವಿಸ್ತರಿಸುವ ಕೆಲಸ ಮಾಡಲಿದ್ದಾರೆ ಎಂದರು.

ಪ್ರಧಾನಿ ಮೋದಿ ಅವಧಿಯಲ್ಲಿ ಕೋವಿಡ್ ಸ್ವಂತ ವ್ಯಾಕ್ಸಿನ್, ಜಮ್ಮು ಕಾಶ್ಮೀರಕ್ಕೆ ಆರ್ಟಿಕಲ್ 370 ಹಿಂತೆಗೆದ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಹೊಸ ಸಂಸತ್ ಭವನ ನಿರ್ಮಾಣ, ತ್ರಿವಳಿ ತಲಾಖ್‌ ನಿಷೇಧ ವಿಧಾನಸಭೆ-ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಹೆಚ್ಚಳ ಸೇರಿದಂತೆ ನೂರಾರು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಿ ದೇಶದಲ್ಲಿ ಅಭಿವೃದ್ಧಿ ಪರ್ವ ನಡೆದಿದೆ. ಈ ಲೋಕಸಭೆ ಚುನಾವಣೆಯಲ್ಲಿಯೂ ಪ್ರಧಾನಿ ಮೋದಿ ಕೈಬಲಪಡಿಸಲು ರಮೇಶ ಜಿಗಜಿಣಗಿ ಅವರನ್ನು ಮತ್ತೆ ಸಂಸದರನ್ನಾಗಿ ಕಳಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು.

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ನನಗೆ ತಲೆಕೆಟ್ಟಿದೆ. ನನ್ನ ಆರೋಗ್ಯ ಸರಿಯಾಗಿಲ್ಲ ಎಂದು ಸುಳ್ಳು ಹೇಳಿ ನನ್ನ ವಿರುದ್ಧ ಕೆಲವರು ಷಡ್ಯಂತ್ರ ರಚಿಸಿದರು. ಆದರೂ ಹೈಕಮಾಂಡ್ ನನಗೆ ಟಿಕೆಟ್ ನೀಡಿದರು. ನನ್ನ ಆರೋಗ್ಯ ಸರಿಯಾಗಿ ಇಲ್ಲದಿದ್ದರೆ ಈಗ ನಿಮ್ಮ ಜೊತೆ ಮಾತನಾಡುತ್ತಿರಲಿಲ್ಲ, ನಾನು ಆರೋಗ್ಯವಾಗಿಯೇ ಇದ್ದೇನೆ ಎಂದರು.

ಜೆಡಿಎಸ್‌ನವರು ಕಳೆದ ಸಲ ನನ್ನ ವಿರುದ್ಧ ಚುನಾವಣೆ ಮಾಡಿದ್ದರು. ಆದರೆ ಈಗ ಜೆಡಿಎಸ್ ಹಾಗೂ ಎನ್‌ಡಿಎ ಮೈತ್ರಿಕೂಟ ಸೇರಿದ್ದರಿಂದ ಜೆಡಿಎಸ್ ಪಕ್ಷದವರು ಅವರ ಎಲ್ಲ ಮತಗಳನ್ನು ಬಿಜೆಪಿಗೆ ಮತಗಳಾಗಿ ಪರಿವರ್ತನೆ ಮಾಡಲು ಮನವಿ ಮಾಡಿದರು. ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ ಅವರ ಸಂಪುಟದಲ್ಲಿ 18 ವರ್ಷಗಳ ಕಾಲ ಮಂತ್ರಿಯಾಗಿ ಕೆಲಸ ನಿರ್ವಹಿಸಿದ್ದೇನೆ. ಜಿಲ್ಲೆಯ ಎಲ್ಲ ಹಳ್ಳಿಗಳಲ್ಲೂ ನನಗೆ ಪರಿಚಯವಿದೆ ಎಂದು ತಿಳಿಸಿದರು.ಬಿಜೆಪಿ ಜಿಲ್ಲಾದ್ಯಕ್ಷ ಆರ್.ಎಸ್.ಪಾಟಿಲ ಕೂಚಬಾಳ ಮಾತನಾಡಿ. ಸದ್ದುಗದ್ದಲ ಇಲ್ಲದೇ ಕಳೆದ 10 ವರ್ಷಗಳಲ್ಲಿ ಸಂಸದರಾಗಿ ರಮೇಶ ಜಿಗಜಿಣಗಿ ಸುಮಾರು 1 ಲಕ್ಷ ಕೋಟಿ ಅನುದಾನ ಜಿಲ್ಲೆಗೆ ತಂದಿದ್ದಾರೆ. ಇಂದು ವಿಜಯಪುರ ಜಿಲ್ಲೆಯ ಸಂಪೂರ್ಣ ಧೂಳು ಮುಕ್ತ ಜಿಲ್ಲೆಯಾಗಿ ಮಾರ್ಪಟ್ಟಿದೆ. ಇದಕ್ಕೆ ಬಿಜೆಪಿ ಸರ್ಕಾರವೇ ಕಾರಣ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಮಾತನಾಡಿ, ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಎರಡು ಪಕ್ಷಗಳ ಭಿನ್ನಾಭಿಪ್ರಾಯ ಬದಿಗೊತ್ತಿ ಒಂದೇ ತಾಯಿ ಮಕ್ಕಳಾಗಿ ಗೆಲ್ಲಿಸಲು ಶ್ರಮ ವಹಿಸುವಂತೆ ಕರೆ ನೀಡಿದರು. ಜಿಲ್ಲೆಯ ಆಲಮಟ್ಟಿ ಆಣೆಕಟ್ಟೆಯ ನೀರಾವರಿ ಯೊಜನೆಗೆ ಪ್ರಧಾನಿಯಾದಾಗ ₹1100 ಕೋಟಿ ಹಣ ಕೊಟ್ಟಿದ್ದರು. ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ, ಸಾಲಮನ್ನಾ ಸೇರಿದಂತೆ ಇತರ ಸಾಧನೆಗಳನ್ನು ಚುನಾವಣೆಗೆ ಸಹಾಯವಾಗಲಿದೆ. ಎರಡೂ ಪಕ್ಷಗಳ ಭಿನ್ನಾಭಿಪ್ರಾಯ ಬದಿಗೊತ್ತಿ ಕಾರ್ಯನಿರ್ವಹಿಸಲು ಶ್ರಮಿಸಬೇಕು ಎಂದರು.

ಮಾಜಿ ಸಚಿವರಾದ ಎಸ್.ಕೆ.ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ವಿಜುಗೌಡ ಪಾಟೀಲ್, ರಾಜಶೇಖರ ಶೀಲವಂತರ, ಕಾಸುಗೌಡ ಬಿರಾದಾರ, ಬಸವರಾಜ ಹೊನವಾಡ, ಸ್ವಪ್ನಾ, ಸಂಜೀವ ಐಹೊಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

----

ಬಾಕ್ಸ್

ಏ.16ರಂದು ಜಿಗಜಿಣಗಿ ನಾಮಪತ್ರ

ಏ.16ರಂದು ಅದ್ಧೂರಿಯಾಗಿ ಎರಡು ಪಕ್ಷಗಳ ಜತೆಗೂಡಿ ಎನ್‌ಡಿಎ ಅಭ್ಯರ್ಥಿಯಾಗಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಾಗುವುದು.

-ರಮೇಶ ಜಿಗಜಿಣಗಿ, ಬಿಜೆಪಿ ಲೋಕಸಭೆ ಅಭ್ಯರ್ಥಿ

--

ಬಿಜೆಪಿಗೆ ಮರಳಿ ಸೇರ್ಪಡೆ:

ಕಳೆದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಹೊರನಡೆದಿದ್ದ ಮುಖಂಡ ರವಿಕಾಂತ ಬಗಲಿ, ರಾಜು ಬಿರಾದಾರ, ಬಾಬು ಏಳಗಂಟಿ, ಚಿನ್ನು ಚಿನಗುಂಡಿ, ಬಸವರಾಜ ಹಳ್ಳಿ, ಬಾಬು ಚವ್ಹಾಣ, ಅಭಿಷೇಕ ಸಾವಂತ ಸೇರಿದಂತೆ ಹಲವರು ಸಂಸದ ಜಿಗಜಿಣಗಿ, ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ನೇತೃತ್ವದಲ್ಲಿ ಮರು ಸೇರ್ಪಡೆಯಾದರು.