ಜನರ ಸಂಕಷ್ಟಕ್ಕೆ ಮಿಡಿಯುವ ಎಚ್ ಡಿಕೆಯನ್ನು ಗೆಲ್ಲಿಸಿ: ರಮಾಮಂಜು

| Published : Apr 22 2024, 02:03 AM IST

ಸಾರಾಂಶ

ಮಂಡ್ಯ ಲೋಕಸಭಾ ಚುನಾವಣೆ ಹಣವಂತ ಮತ್ತು ಹೃದಯವಂತರ ನಡುವಿನ ಚುನಾವಣೆ. ನಾಡು ಕಂಡ ಅಪರೂಪದ ಜನಾನುರಾಗಿ ನಾಯಕ ಎಚ್.ಡಿ.ಕುಮಾರಸ್ವಾಮಿ ರೈತರ ಸಂಕಷ್ಟಕ್ಕೆ ಸದಾ ಮಿಡಿಯುವ ಹೃದಯವಂತರು. ಸಮಸ್ತ ಕರ್ನಾಟಕದ ಅಭಿವೃದ್ಧಿಗೆ ಜಿಲ್ಲೆಯ ಜನ ಕುಮಾರಣ್ಣನನ್ನು ಆಯ್ಕೆ ಮಾಡಿ ಲೋಕಸಭೆಗೆ ಕಳುಹಿಸುವಂತೆ ಕರಪತ್ರಗಳನ್ನು ಹಂಚಿ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆಮಾತೃ ಹೃದಯಿ, ರೈತರ ಕಣ್ಮಣಿ, ನಾಡಿನ ಜನರ ಸಂಕಷ್ಟಕ್ಕೆ ಮಿಡಿಯುವ ಸ್ವಭಾವ ಹೊಂದಿರುವ ಮೈತ್ರಿ ಅಭ್ಯರ್ಥಿ ಎಚ್. ಡಿ.ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕು ಎಂದು ಶಾಸಕ ಎಚ್.ಟಿ.ಮಂಜು ಧರ್ಮಪತ್ನಿ ರಮಾಮಂಜು ಮನವಿ ಮಾಡಿದರು.

ಪಟ್ಟಣದ ಅಗ್ರಹಾರ ಬಡಾವಣೆ ಸೇರಿ ವಿವಿಧ ವಾರ್ಡುಗಳಲ್ಲಿ ಸಂಚರಿಸಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಪರ ಮತಯಾಚನೆ ಮಾಡಿ ಮಾತನಾಡಿ, ಎರಡು ಬಾರಿ ಮುಖ್ಯಮಂತ್ರಿಯಾಗಿ ನಾಡಿನ ಬಡವರ, ರೈತರ ಹಾಗೂ ನೊಂದವರ ದನಿಯಾಗಿ ಅವರಿಗೆ ಜನಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು.

ಮಂಡ್ಯ ಲೋಕಸಭಾ ಚುನಾವಣೆ ಹಣವಂತ ಮತ್ತು ಹೃದಯವಂತರ ನಡುವಿನ ಚುನಾವಣೆ. ನಾಡು ಕಂಡ ಅಪರೂಪದ ಜನಾನುರಾಗಿ ನಾಯಕ ಎಚ್.ಡಿ.ಕುಮಾರಸ್ವಾಮಿ ರೈತರ ಸಂಕಷ್ಟಕ್ಕೆ ಸದಾ ಮಿಡಿಯುವ ಹೃದಯವಂತರು. ಸಮಸ್ತ ಕರ್ನಾಟಕದ ಅಭಿವೃದ್ಧಿಗೆ ಜಿಲ್ಲೆಯ ಜನ ಕುಮಾರಣ್ಣನನ್ನು ಆಯ್ಕೆ ಮಾಡಿ ಲೋಕಸಭೆಗೆ ಕಳುಹಿಸುವಂತೆ ಕರಪತ್ರಗಳನ್ನು ಹಂಚಿ ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಲ್ಲಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದೆ. ಅಲ್ಲದೇ ಭಾರತದ ಆರ್ಥಿಕತೆ ವೇಗವಾಗಿ ಬೆಳೆಯಲು ಕ್ರಮ ಕೈಗೊಂಡಿದ್ದಾರೆ. ಭ್ರಷ್ಟಚಾರ ರಹಿತ, ಪಾರದರ್ಶಕ ಆಡಳಿತ ನಡೆಸುತ್ತಿದ್ದಾರೆ. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕೋರಿದರು.

ತಾಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಖಾ ಸೇರಿ ನೂರಾರು ಮಹಿಳಾ ಕಾರ್ಯಕರ್ತರು, ಹಲವರು ಇದ್ದರು.