ಕೇಂದ್ರ ಸರ್ಕಾರ ಕಿತ್ತೊಗೆಯಲು ಗಡ್ಡದೇವರಮಠರನ್ನು ಗೆಲ್ಲಿಸಿ-ಕೃಷ್ಣ ಬೈರೇಗೌಡ

| Published : May 01 2024, 01:16 AM IST

ಕೇಂದ್ರ ಸರ್ಕಾರ ಕಿತ್ತೊಗೆಯಲು ಗಡ್ಡದೇವರಮಠರನ್ನು ಗೆಲ್ಲಿಸಿ-ಕೃಷ್ಣ ಬೈರೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಕ್ಕೆ ಬರ ಪರಿಹಾರ ವಿತರಣೆಯಲ್ಲಿ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಲು ಮತ್ತು ಪ್ರಧಾನಿ ಮೋದಿ ಎದುರು ಮಾತನಾಡಲು ದಮ್ಮು ಮತ್ತು ತಾಕತ್ತಿಲ್ಲದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರಾಗಿ ಮುಂದುವರೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಬ್ಯಾಡಗಿ: ರಾಜ್ಯಕ್ಕೆ ಬರ ಪರಿಹಾರ ವಿತರಣೆಯಲ್ಲಿ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಲು ಮತ್ತು ಪ್ರಧಾನಿ ಮೋದಿ ಎದುರು ಮಾತನಾಡಲು ದಮ್ಮು ಮತ್ತು ತಾಕತ್ತಿಲ್ಲದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರಾಗಿ ಮುಂದುವರೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಬ್ಯಾಡಗಿ ಪಟ್ಟಣದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಬೃಹತ್ ರೋಡ್ ಶೋ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಶಾಸಕರಾಗಿ, ಸಚಿವರಾಗಿ, ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದಾರೆ. ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಅವರನ್ನು ಭೇಟಿ ಮಾಡಲು ದೆಹಲಿ ಹಾಗೂ ಬೆಂಗಳೂರಿಗೆ ಹೋಗಬೇಕಾಗುತ್ತದೆ. ಆದರೆ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಗೆಲ್ಲಿಸಿದರೆ ತಮ್ಮ ಹಳ್ಳಿ, ತಮ್ಮ ಮನೆ ಬಾಗಿಲಿಗೆ ಬಂದು ಭೇಟಿ ನೀಡಿ ಸಂಕಷ್ಟಗಳಿಗೆ ಸ್ಪಂದಿಸುವರು. ಈ ಹಿನ್ನೆಲೆಯಲ್ಲಿ ಆಯ್ಕೆ ನಿಮ್ಮ ಕೈಯಲ್ಲಿದೆ ಎಂದರು. ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಾತನಾಡಿ, ಜನರ ಪ್ರೀತಿ, ವಿಶ್ವಾಸ ಗಮನಿಸಿದರೆ ಆನಂದಸ್ವಾಮಿ ಗಡ್ಡದೇವರಮಠ ಅತಿ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸಲು ಗ್ಯಾರಂಟಿ ಯೋಜನೆಗಳು ನಮ್ಮ ಪಕ್ಷಕ್ಕೆ ಶ್ರೀರಕ್ಷೆಯಾಗಲಿವೆ ಎಂಬ ವಿಶ್ವಾಸ ನನ್ನದು ಎಂದರು.

ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ನಿಮ್ಮೆಲ್ಲರ ಪ್ರೀತಿ, ಅಭಿಮಾನ ಕಂಡು ಮಾತನಾಡಲು ಪದಗಳು ಸಿಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಡಿ ಮುನ್ನಡೆಯಲು ತಮ್ಮ ಆಶೀರ್ವಾದ ಬೇಡುವೆ. ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನನ್ನ ಪಕ್ಷದ ಗುರುತು ಹಸ್ತಕ್ಕೆ ಮತ ನೀಡಬೇಕೆಂದು ಮನವಿ ಮಾಡಿದರು.ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ಜಿಲ್ಲೆ ಹಾಗೂ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಮಾಡಲು, ನನ್ನ ಕೈ ಬಲಪಡಿಸಲು ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಮತ ನೀಡಬೇಕೆಂದು ಕೋರಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಮುಖಂಡರಾದ ವೀರನಗೌಡ ಪೊಲೀಸಗೌಡ್ರ, ಮಹಾಂತೇಶ ಮಾಸಣಗಿ, ಖಾದರಸಾಬ ದೊಡ್ಡಮನಿ, ರಮೇಶ ಸುತಕೋಟಿ, ಜಗದೀಶ ದೊಡ್ಡಮನಿ, ವೀರೇಶ ಮತ್ತಿಹಳ್ಳಿ, ದುರಗೇಶ ಗೋಣೆಮ್ಮನವರ, ಸೋಮಣ್ಣ ಸಂಕಣ್ಣನವರ, ಶಂಭಣ್ಣ ಪಾಟೀಲ, ಚನ್ನಬಸಪ್ಪ ಹುಲ್ಲತ್ತಿ, ರವಿ ಕುಮ್ಮೂರ, ಬಸವರಾಜ ಸವಣೂರ ಇದ್ದರು.