ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ: ಕೆ.ಎಸ್.ಆನಂದ್

| Published : Apr 14 2024, 01:45 AM IST

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ: ಕೆ.ಎಸ್.ಆನಂದ್
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಕಡೂರು ಸೇರಿದಂತೆ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರ ಪ್ರಭುಗಳು ಅತಿಹೆಚ್ಚಿನ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಶಾಸಕ ಕೆ.ಎಸ್.ಆನಂದ್ ಹೇಳಿದರು.

ಸಿಂಗಟಗೆರೆ ಜಿಪಂನ ರಂಗಾಪುರದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಬಹಿರಂಗ ಸಭೆ

- ಅತಿಹೆಚ್ಚಿನ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ

- ಪ್ರಜ್ವಲ್ ಅವರು ಕ್ಷೇತ್ರಕ್ಕೆ ಕೊಡುಗೆ ಏನು ಎಂಬುದೇ ಪ್ರತಿಯೊಬ್ಬರ ಪ್ರಶ್ನೆ

- ಕೇವಲ ಅಧಿಕಾರದ ದಾಹಕ್ಕಾಗಿ ಕುಟುಂಬ ರಾಜಕಾರಣ

- ಮತದಾರರು ಸೂಕ್ಷ್ಮವಾಗಿ ಅರ್ಥೈಸಿ ಕೊಳ್ಳಬೇಕು

ಕನ್ನಡಪ್ರಭ ವಾರ್ತೆ, ಕಡೂರು

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಕಡೂರು ಸೇರಿದಂತೆ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರ ಪ್ರಭುಗಳು ಅತಿಹೆಚ್ಚಿನ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಶಾಸಕ ಕೆ.ಎಸ್.ಆನಂದ್ ಹೇಳಿದರು.

ತಾಲೂಕಿನ ಸಿಂಗಟಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳು ಮತ್ತು ರಂಗಾಪುರ ಗ್ರಾಮದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ಮತಯಾಚನೆ ಬಹಿರಂಗ ಸಭೆಯಲ್ಲಿ ಮಾತನಾಡಿದರು.ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಚುನಾಯಿತರಾದ ಪ್ರಜ್ವಲ್ ಅವರು ಕ್ಷೇತ್ರಕ್ಕೆ ಕೊಡುಗೆ ಏನು ಎಂಬುದೇ ಪ್ರತಿಯೊಬ್ಬರ ಪ್ರಶ್ನೆಯಾಗಿ ಉದ್ಬವಿಸಿದೆ. ಏನು ಎಂಬುದೇ ಯಾರಿಗೂ ತಿಳಿದಿಲ್ಲ. ಬಹುಮುಖ್ಯವಾಗಿ ಈ ಭಾಗದ ಜನಸಾಮಾನ್ಯರ ಕಷ್ಟ-ಸುಖಗಳಿಗೆ ಮತ್ತೇ ಸ್ಪಂದಿಸುವವರೇ ಎಂಬುದನ್ನು ಪ್ರಶ್ನಿಸಿಕೊಳ್ಳಬೇಕಿದೆ. ಕೇವಲ ಅಧಿಕಾರದ ದಾಹಕ್ಕಾಗಿ ದೇವೇಗೌಡರ ಕುಟುಂಬ ರಾಜಕಾರಣ ನಡೆಸುತ್ತಿದೆಯೇ ಹೊರತು ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಕಿಡಿಕಾರಿದರು. ಕಾಂಗ್ರೆಸ್ ಪಕ್ಷ ಒಬ್ಬ ಪ್ರಬುದ್ಧ ಯುವನಾಯಕನನ್ನು ಹಾಸನ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಈಗಾಗಲೇ ಹಾಸನ ಸೇರಿದಂತೆ ಲೋಕಸಭೆ ವ್ಯಾಪ್ತಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾದ ಬದಲಾವಣೆ ಗಾಳಿ ಬೀಸುತ್ತಿದೆ. ಕಡೂರು ಕ್ಷೇತ್ರದಲ್ಲಿ ಅತಿಹೆಚ್ಚಿನ ಅಂತರದಲ್ಲಿ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿಗೆ ಕೊಡಿಸುವ ಮೂಲಕ ಜನಪರ ಕಾಳಜಿವಹಿಸುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಜಿಪಂ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಕಾಂಗ್ರೆ ಸ್ ಮೈತ್ರಿಯೊಂದಿಗೆ ಪ್ರಜ್ವಲ್ ಆಯ್ಕೆಗೊಂಡರೂ ಕ್ಷೇತ್ರಕ್ಕೆ ಗುರುತರವಾದ ಯಾವುದೇ ಪ್ರಯೋಜನಕಾರಿಯಾಗಿಲ್ಲ. ಕೇವಲ ಸ್ವಾರ್ಥಕ್ಕಾಗಿ ರಾಜಕಾರಣ ನಡೆಸುವ ಜೆಡಿಎಸ್ ಪಕ್ಷದ ಅಭ್ಯರ್ಥಿ ಈ ಭಾಗಕ್ಕೆ ಅವಶ್ಯಕತೆ ಇದೆಯೇ ಎಂಬುದನ್ನು ಮತದಾರರು ಸೂಕ್ಷ್ಮವಾಗಿ ಅರ್ಥೈಸಿ ಕೊಳ್ಳಬೇಕು. ಈ ಭಾರಿ ಕಾಂಗ್ರೆಸ್ ಗೆಲುವು ಖಚಿತ ಎಂದರು. ಪುರಸಭಾ ಸದಸ್ಯ ಭಂಡಾರಿ ಶ್ರೀನಿವಾಸ್ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ಅತಿಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಲು ಕ್ಷೇತ್ರಾದ್ಯಂತ ಮತದಾರರು ಉತ್ಸುಕರಾಗಿದ್ದಾರೆ. ರಾಜ್ಯದ ಅಭಿವೃದ್ಧಿ ವಿಚಾರದಲ್ಲೂ ಕ್ಷೇತ್ರವನ್ನು ಶಾಸಕರು ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುತ್ತಿದ್ದು ಈ ನಿಟ್ಟಿನಲ್ಲಿ ಹಾಸನ ಲೋಕಸಭೆಗೂ ಕಾಂಗ್ರೆಸ್ ಗೆಲುವಿನೊಂದಿಗೆ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಎರಡೂ ಶಕ್ತಿಗಳು ಕೈ ಜೋಡಿಸಿದಂತಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಿಂಗಟಗೆರೆ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಶಾಸಕ ಕೆ.ಎಸ್.ಆನಂದ್ ಮತಪ್ರಚಾರ ನಡೆಸಿದರು. ತಾಪಂ ಮಾಜಿ ಉಪಾಧ್ಯಕ್ಷ ಪಂಚನಹಳ್ಳಿ ಪ್ರಸನ್ನ, ಅಬಿದ್ ಪಾಷ, ಮಧು, ತಿಪ್ಪೇಶ್, ಕೆ.ಜಿ. ಶ್ರೀನಿವಾಸಮೂರ್ತಿ, ಧನಂಜಯ್, ಸಿಂಗಟಗೆರೆ ರಮೇಶ್, ಮಹಿಳಾ ಘಟಕದ ಅಧ್ಯಕ್ಷೆ ರೇವತಿ ನಾಗರಾಜ್, ಸವಿತಾ ಪಾಟೀಲ್ ಮತ್ತಿತರಿದ್ದರು. 13ಕೆಕೆಡಿಯ 2.

ಕಡೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಹಾಸನ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ಶಾಸಕ ಕೆ.ಎಸ್.ಆನಂದ್ ಮತಪ್ರಚಾರದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಶರತ್‌ ಕೃಷ್ಣಮೂರ್ತಿ, ಭಂಡಾರಿ ಶ್ರೀನಿವಾಸ್, ಪಂಚನಹಳ್ಳಿ ಪ್ರಸನ್ನ, ಅಬಿದ್ ಪಾಷಾ, ಮಧು, ರಮೇಶ್ ಮತ್ತಿತರರಿದ್ದರು.