ಸಾರಾಂಶ
-ಕಾಂಗ್ರೆಸ್ ಪಕ್ಷಕ್ಕೆ ಪುರಸಭೆ ಮಾಜಿ ಅಧ್ಯಕ್ಷ ಬೈಟು ರಮೇಶ್ ಮತ್ತಿತರ ಮುಖಂಡರ ಸೇರ್ಪಡೆ
--- ಜಿಲ್ಲೆಯಲ್ಲಿ ಐದೂ ಜನ ಶಾಸಕರು ಕ್ರೀಯಾಶೀಲ
- ಅಡಕೆಗೆ ಹೆಚ್ಚು ಬೆಲೆ ದೊರೆಯುವಂತೆ ಮಾಡಿದ್ದು ಜಯಪ್ರಕಾಶ್ ಹೆಗ್ಡೆ- ಜಯಪ್ರಕಾಶ್ ಹೆಗ್ಡೆ ಅವರು ಪ್ರಾಮಾಣಿಕರು ಮತ್ತು ಸರಳ ವ್ಯಕ್ತಿ
ಕನ್ನಡಪ್ರಭ ವಾರ್ತೆ, ತರೀಕೆರೆಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಆಂಶುಮಂತ್ ಹೇಳಿದ್ದಾರೆ.ಶುಕ್ರವಾರ ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಬೈಟು ರಮೇಶ್, ಶಬೀರ್ ಆಹಮದ್, ಖಮರ್ ಪಾಶ ಸೇರಿದಂತೆ ಸುಮಾರು ಇಪ್ಪತ್ತು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಆತ್ಮೀಯವಾಗಿ ಪಕ್ಷವನ್ನು ಸಂಘಟಿಸಿ, ಅನೇಕ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಐದೂ ಜನ ಶಾಸಕರು ಕ್ರೀಯಾಶೀಲರಾಗಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಹೋಗಬೇಕು ಎಂದು ಹೇಳಿದರು.ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಒಳ್ಳೆಯ ಹೆಸರಿದೆ. ಅಡಕೆಗೆ ಹೆಚ್ಚು ಬೆಲೆ ದೊರೆಯುವಂತೆ ಮಾಡಿದ್ದು ಜಯಪ್ರಕಾಶ್ ಹೆಗ್ಡೆ . ಚತುಷ್ಪದ ರಸ್ತೆ ಇತ್ಯಾದಿ ಅನೇಕ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಿದ್ದಾರೆ. ಅತ್ಯಂತ ಹೆಚ್ಚಿನ ಮತ ನೀಡಿ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳಿಸಿಕೊಡಬೇಕು. ಇದರಲ್ಲಿ ಎಲ್ಲರೂ ಒಗ್ಗಟ್ಟಾಗಿ ಇರೋಣ ಎಂದು ಹೇಳಿದರು.ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಫಾರೂಕ್ ಮಾತನಾಡಿ ಕಾಂಗ್ರೆಸ್ ಬಹಳ ದೊಡ್ಡ ಪಕ್ಷ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಅಂಶುಮಂತ್, ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ನೇತೃತ್ವದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಬೈಟು ರಮೇಶ್, ಶಬೀರ್ ಆಹಮದ್, ಖಮರ್ ಪಾಷ ಮತ್ತಿತರ ಸುಮಾರು ಇಪ್ಪತ್ತು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಎಲ್ಲರಿಗೂ ಸಂತೋಷ ತಂದಿದೆ ಎಂದು ಹೇಳಿದರು.ಪುರಸಭೆ ಮಾಜಿ ಅಧ್ಯಕ್ಷ ಬೈಟು ರಮೇಶ್ ಮಾತನಾಡಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಪ್ರಾಮಾಣಿಕರು ಮತ್ತು ಸರಳ ವ್ಯಕ್ತಿಯಾಗಿದ್ದಾರೆ. ಇನ್ನೂ ನಮ್ಮ ಅನೇಕ ಸ್ನೇಹಿತರು ಕಾಂಗ್ರೆಸ್ ಪಕ್ಷ ಸೇರುತ್ತಾರೆ. ನಾವು ಮತ್ತು ನಮ್ಮ ಸ್ನೇಹಿತರು ಮನಃ ಪೂರ್ವಕವಾಗಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇವೆ. ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಅತ್ಯಂತ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಕೆಪಿಸಿಸಿ ಸದಸ್ಯ ಎಚ್.ವಿಶ್ವನಾಥ್ ಮಾತನಾಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ. ಅತ್ಯಂತ ಹೆಚ್ಚಿನ ಮತ ನೀಡಿ ಅವರನ್ನು ಗೆಲ್ಲಿಸೋಣ, ಎಲ್ಲರೂ ಒಗ್ಗಟ್ಟಾಗಿರೋಣ ಎಂದು ಹೇಳಿದರು.ಕಾಂಗ್ರೆಸ್ ಸಮಿತಿ ನಗರಾಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್.ಧರ್ಮರಾಜ್, ಟಿ.ಜೆ. ಗೋಪಿಕುಮಾರ್, ಪುರಸಭೆ ಸದಸ್ಯರು ಟಿ.ಜಿ.ಶಶಾಂಕ್, ಮುಖಂಡ ಗಿರಿರಾಜ್, ಪ್ರಚಾರ ಸಮಿತಿ ಅಧ್ಯಕ್ಷ ಪರಶುರಾಮ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಆದಿಲ್ ಪಾಷ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇರ್ಷಾದ್ ಅಹಮದ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
5ಕೆಟಿಆರ್.ಕೆ.2ಃ)ತರೀಕೆರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಅಂಶುಮಂತ್, ಶಾಸಕ ಜಿ.ಎಚ್. ಶ್ರೀನಿವಾಸ್ ಅವರ ನೇತೃತ್ವದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಬೈಟು ರಮೇಶ್, ಶಬೀರ್ ಆಹಮದ್, ಖಮರ್ ಪಾಶ ಸೇರಿದಂತೆ ಸುಮಾರು ಇಪ್ಪತ್ತು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. .