ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸುನಿಲ್ ದೇವಯ್ಯ

| Published : Dec 23 2024, 01:00 AM IST

ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸುನಿಲ್ ದೇವಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಕ್ರೀಡೆಯಲ್ಲಿ ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ನೆರವಂಡ ಸುನಿಲ್‌ ದೇವಯ್ಯ ತಿಳಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನೆರವಂಡ ಸುನಿಲ್ ದೇವಯ್ಯ ಹೇಳಿದರು.

ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಗಳಿಗೆ ಆದ್ಯತೆ ನೀಡಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಉನ್ನತ ಸ್ಥಾನಕ್ಕೆ ಏರಲು ಸಾಧ್ಯ ಎಂದರು.

ಕ್ರೀಡಾಕೂಟದಲ್ಲಿ ಸಿಂಧು ತಂಡ ಸಮಗ್ರ ಪಾರಿತೋಷಕವನ್ನು ಪಡೆದುಕೊಂಡರೆ ದ್ವಿತೀಯ ಸ್ಥಾನವನ್ನು ಕೃಷ್ಣ ತಂಡದವರು ಪಡೆದುಕೊಂಡರು.

ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಿರ್ದೇಶಕರಾದ ಪ್ರೊ.ಕಲ್ಯಾಟಂಡ ಪೂಣಚ್ಚ, ಅಪ್ಪಾರಂಡ ಅಪ್ಪಯ್ಯ, ಬಿದ್ದಾಟಂಡ ಮುದ್ದಯ್ಯ, ಕೊಂಬಂಡ ಗಣೇಶ, ನಾಯಕಂಡ ದೀಪಕ್ ಚಂಗಪ್ಪ, ಕಲಿಯಂಡ ಕೌಶಿಕ್ ಕುಶಾಲಪ್ಪ, ಪ್ರಾಂಶುಪಾಲರಾದ ಬಿ.ಎಂ.ಶಾರದಾ ಅಪ್ಪಣ್ಣ ಉಪಸ್ಥಿತರಿದ್ದರು.

ಪರಿಧಿ ಪೊನ್ನಮ್ಮ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಬಿ.ಎಮ್ ಶಾರದ ಸ್ವಾಗತಿಸಿದರು. ಶಿಕ್ಷಕರಾದ ಕಾಳಯ್ಯ ಎಂ.ಡಿ ಮತ್ತು ಭಗವತಿ ಪ್ರಸಾದ್ ಎ.ಟಿ ನಿರೂಪಿಸಿದರು. ಸೌಮ್ಯ ಬಿ.ಪಿ ಅತಿಥಿಗಳ ಪರಿಚಯಿಸಿದರು. ಸರಿತಾ ಕೆ ಕೆ ಕ್ರೀಡಾ ವರದಿ ವಾಚಿಸಿ ರೇಷ್ಮಾ ವಿ .ಎನ್ ವಂದಿಸಿದರು.