ಉತ್ತಮ ಶಿಕ್ಷಣದಿಂದ ಪ್ರಜ್ಞಾವಂತ ಪ್ರಜೆ: ನ್ಯಾ.ವಾಂಜೆಂಡಾ ಬೋಪಯ್ಯ

| Published : Jan 12 2025, 01:19 AM IST

ಸಾರಾಂಶ

ನಾಪೋಕ್ಲು ಸಮೀಪದ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಕೊಡವ ಸಮಾಜದಲ್ಲಿ ಶನಿವಾರ ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವುದರ ಮೂಲಕ ಸಮಾಜದ ಪ್ರಜ್ಞಾವಂತ ಪ್ರಜೆಗಳಾಗಬೇಕು ಎಂದು ನಿವೃತ್ತ ಜಿಲ್ಲಾ ಸತ್ರ ನ್ಯಾಯಾಧೀಶ ವಾಂಜೆಂಡಾ ಜಿ ಬೋಪಯ್ಯ ಹೇಳಿದ್ದಾರೆ.

ಇಲ್ಲಿನ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಕೊಡವ ಸಮಾಜದಲ್ಲಿ ಶನಿವಾರ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸಿ ಭವಿಷ್ಯಕ್ಕೆ ಮಹತ್ತರ ಬುನಾದಿ ಹಾಕುವ ಶಿಕ್ಷಕರನ್ನು ಗೌರವಿಸಬೇಕು. ಬಾಹ್ಯ ಪ್ರಪಂಚದ ಆಕರ್ಷಣೆಗಳಿಂದ ವಿದ್ಯಾರ್ಥಿಗಳ ಮನಸ್ಸು ವಿಚಲತಗೊಳ್ಳಬಾರದು ಎಂದ ಅವರು, ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ನೂತನ ಶಾಲೆ ಸ್ಥಾಪನೆ ಮಾಡಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಿದೆ ಎಂದರು.

ಶಿಕ್ಷಕರು ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವುದರ ಜೊತೆಗೆ ಬದುಕು ಕಟ್ಟಿಕೊಳ್ಳು ಲು

ನೆರವಾಗುತ್ತಾರೆ. ಅಂತವರನ್ನು ಗೌರವದಿಂದ ಕಾಣಬೇಕು ಎಂದರು.

ವಿದ್ಯಾಸಂಸ್ಥೆ ಅಧ್ಯಕ್ಷ ಕುಟ್ಟ೦ಚೆಟ್ಟಿರ ಮಾದಪ್ಪ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನವನ್ನು ವಿತರಿಸಿದರು.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ತಾಲೂಕು ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ನಿರ್ದೇಶಕರಾದ ಕೆ.ಎಂ ಶರತ್, ಬಿ.ಎಸ್. ಭವ್ಯ, ವಿದ್ಯಾ ಸುರೇಶ್,

ಮುಖ್ಯ ಶಿಕ್ಷಕ ತಮ್ಮಯ್ಯ ಮತ್ತಿತರರಿದ್ದರು.

ವಿದ್ಯಾರ್ಥಿ ಬಿಶನ್ ಬಿದ್ದಪ್ಪ ಪ್ರಾರ್ಥಿಸಿದರು. ಶಿಕ್ಷಕಿ ಸಂಧ್ಯಾ ಪಿ.ಜಿ ಸ್ವಾಗತಿಸಿದರು.

ಶಿಲ್ಪ ವಿ.ಎ.ನಿರೂಪಿಸಿದರು. ತಮ್ಮಯ್ಯ ಅತಿಥಿಗಳ ಪರಿಚಯಿಸಿದರು. ಭವ್ಯ ಬಿ ಎಸ್ ವರದಿ ವಾಚಿಸಿದರು. ರಹಾನ ಬಿ ಎಸ್ ವಂದಿಸಿದರು.

ವಾರ್ಷಿಕೋತ್ಸವದ ಅಂಗವಾಗಿ ವೈವಿಧ್ಯತೆಯಲ್ಲಿ ಏಕತೆ ಸಾರುವ ನೃತ್ಯಗಳು, ರೂಪಕಗಳು, ವಿವಿಧ ಭಾಷೆ ಜನಾಂಗ ,ಸಂಸ್ಕೃತಿ ಸಾರುವ ನೃತ್ಯ ರೂಪಕಗಳು ಗಮನ ಸೆಳೆದವು.