ಸಂವಿಧಾನದ ಆಶಯಗಳು ಪ್ರತಿ ಪ್ರಜೆಗೆ ತಲುಪಬೇಕು: ಜಿಲ್ಲಾಧಿಕಾರಿ ನಿತೀಶ ಕೆ

| Published : Sep 16 2024, 01:47 AM IST

ಸಾರಾಂಶ

ಶಾಸಕಿ ಕರೆಮ್ಮ ಜಿ.ನಾಯಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಹಾಯಕ ಆಯುಕ್ತ ಗಜಾನನ ಬಳೆ ಸಂವಿಧಾನ ಪೀಠಿಕೆ ಬೋಧಿಸಿದರು.

ಕನ್ನಡಪ್ರಭ ವಾರ್ತೆ ದೇವದುರ್ಗ

ಪ್ರಜಾಪ್ರಭುತ್ವ ದೇಶಕ್ಕೆ ಡಾ.ಬಿ.ಅರ್.ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯಗಳು ಪ್ರತಿ ಪ್ರಜೆಗೂ ತಲುಪಬೇಕು. ಸಮಾನತೆ, ಸಮಬಾಳು ನಿತ್ಯ ಜೀವನದಲ್ಲಿ ಕಾಣಬೇಕಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ ಕೆ.ತಿಳಿಸಿದರು.

ತಾಲೂಕಿನ ಗೂಗಲ್ ಗ್ರಾಮದ ಶ್ರೀ ಅಲ್ಲಮಪ್ರಭು ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಂವಿಧಾನದಲ್ಲಿರುವ ಹಕ್ಕುಗಳು, ಕರ್ತವ್ಯಗಳು ಒಳಗೊಂಡಂತೆ ಎಲ್ಲಾ ಅಂಶಗಳು ಸಮರ್ಪಕವಾಗಿ ಜಾರಿಯಾಗಲು ಎಲ್ಲರೂ ಶ್ರಮಿಸಿಬೇಕು. ಸಮಗ್ರ ಅಭಿವೃದ್ಧಿಯಾದಾಗ ಮಾತ್ರ ಪ್ರಜಾಪ್ರಭುತ್ವ ದಿನಾಚರಣೆ ಅರ್ಥಪೂರ್ಣವಾಗುತ್ತದೆ.

ಈ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸದವರೆಲ್ಲರೂ ಅಭಿನಂದನಾರ್ಹರು. ಇದೊಂದು ಸಂತಸದ ಕ್ಷಣ ಮತ್ತು ಹೆಮ್ಮೆಯ ಕಾರ್ಯಕ್ರಮವಾಗಿದೆ. ಸಮಗ್ರ ಅಭಿವೃದ್ಧಿಯೇ ಸಂವಿಧಾನದ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

ಶಾಸಕಿ ಕರೆಮ್ಮ ಜಿ.ನಾಯಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಹಾಯಕ ಆಯುಕ್ತ ಗಜಾನನ ಬಳೆ ಸಂವಿಧಾನ ಪೀಠಿಕೆ ಬೋಧಿಸಿದರು.

ಸಿಇಒ ಪಾಂಡ್ವೆ ರಾಹುಲ್ ತುಕಾರಾಂ, ಎಪಿಎಂಸಿ ಅಧ್ಯಕ್ಷ ಆದನಗೌಡ ಪಾಟೀಲ್ ಬುಂಕಲದೊಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದಪ್ಪ, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧಿಕಾರಿ ರವೀಂದ್ರ ಜಲ್ದಾರ, ಎಸ್ಟಿ ನಿಗಮ ಅಧಿಕಾರಿ ಶ್ರೀಶೈಲ್ ಕಾಚಾಪೂರ, ತಹಸೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ತಾಪಂ ಇಒ ಬಸವರಾಜ ಹಟ್ಟಿ, ಬಿಇಒ ಸುಖದೇವ, ತಾಲೂಕು ಸಮಾಜ ಕಲ್ಯಾಣಧಿಕಾರಿ ರಾಜಕುಮಾರ, ಕೆಡಿಪಿ ಸದಸ್ಯರು ಹಾಗೂ ಇತರೆ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.