ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಾರದೆ?-ಸಿದ್ದರಾಮಯ್ಯ

| Published : Jan 03 2024, 01:45 AM IST

ಸಾರಾಂಶ

ಅತಿಥಿ ಉಪನ್ಯಾಸಕರ ಕಾಯಮಾತಿ ಮಾಡಿಕೊಳ್ಳಲು ಆಗುವುದಿಲ್ಲ. ಕಾನೂನು ತೊಡಕಿದೆ ಎಂದು ಈಗಾಗಲೇ ಹೇಳಿದ್ದೇವೆ. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಏನು ಮಾಡಕಾಗುತ್ತೆ? ಕಾನೂನು ಪ್ರಕಾರ ಮಾಡುವುದು ಕಷ್ಟ ಇದೆ

ಕೊಪ್ಪಳ: ತಪ್ಪು ಮಾಡಿದವರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳಬಾರದೆ? ತಪ್ಪು ಮಾಡಿದರೂ ಬಿಟ್ಟು ಬಿಡಬೇಕಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೊಪ್ಪಳ ಬಳಿ ವಿಮಾನ ತಂಗುದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕರ ಸೇವಕರ ಬಂಧನ ವಿಚಾರಕ್ಕೆ ಈ ರೀತಿ ಪ್ರತಿಕ್ರಿಯಿಸಿದರು.

ಅಂದೊಂದು ಕಾನೂನು ಪ್ರಕ್ರಿಯೆ. ಪೊಲೀಸರು ಕಾನೂನು ರೀತಿ ಕ್ರಮ ವಹಿಸಿದ್ದಾರೆ. ಹಳೆಯ ಪ್ರಕರಣ ವಿಲೇವಾರಿ ಮಾಡುವಂತೆ ಸೂಚಿಸಿದ್ದೇವೆ. ಕೋರ್ಟ್ ಸಹ ನಿರ್ದೇಶನ ನೀಡಿದ್ದರಿಂದ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಅದರಲ್ಲಿ ತಪ್ಪೇನು? ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದರು.

ಕೇಂದ್ರ ಸರ್ಕಾರ ರಜೆ ಕೊಡಲಿ:

ಶ್ರೀರಾಮಮಂದಿರದ ಉದ್ಘಾಟನಾ ದಿನವಾದ ಜ. 22ರಂದು ಸರ್ಕಾರಿ ರಜೆ ನೀಡುವಂತೆ ಆಗ್ರಹ ಕೇಳಿ ಬರುತ್ತಿದೆ ಎನ್ನುವ ಪ್ರಶ್ನೆಗೆ ಕೇಂದ್ರ ಸರ್ಕಾರ ಕೊಡಲಿ, ನಾವೇಕೆ ಕೊಡಬೇಕು ಎಂದು ಪ್ರಶ್ನಿಸಿದರು.

ಅತಿಥಿ ಉಪನ್ಯಾಸಕರ ಕಾಯಮಾತಿ ಮಾಡಿಕೊಳ್ಳಲು ಆಗುವುದಿಲ್ಲ. ಕಾನೂನು ತೊಡಕಿದೆ ಎಂದು ಈಗಾಗಲೇ ಹೇಳಿದ್ದೇವೆ. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಏನು ಮಾಡಕಾಗುತ್ತೆ? ಕಾನೂನು ಪ್ರಕಾರ ಮಾಡುವುದು ಕಷ್ಟ ಇದೆ ಎಂದರು.

ಈಗಾಗಲೇ ಘೋಷಣೆ ಮಾಡಿರುವ ಪ್ರತಿ ರೈತರಿಗೆ ₹2 ಸಾವಿರ ನೀಡುವುದಕ್ಕೆ ತಾಂತ್ರಿಕ ಸಮಸ್ಯೆಯಾಗಿದೆ. ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಆನಂತರ ಜಮೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಇದ್ದರು.