ದೆಹಲಿಗೆ ಮಹಿಳಾ ಮುಖ್ಯಮಂತ್ರಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

| Published : Feb 23 2025, 12:30 AM IST

ದೆಹಲಿಗೆ ಮಹಿಳಾ ಮುಖ್ಯಮಂತ್ರಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು.ಈ ಸಂದರ್ಭ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾತನಾಡಿ, ಸುಧೀರ್ಘ 27 ವರ್ಷಗಳ ಬಳಿಕ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೊದಲ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ ಮಹಿಳಾ ಶಾಸಕಿ ರೇಖಾ ಗುಪ್ತಾ ಅವರನ್ನು ರಾಷ್ಟ್ರ ರಾಜಧಾನಿಯ ಗದ್ದುಗೆಗೆ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ದೆಹಲಿಯ ಮುಖ್ಯಮಂತ್ರಿ ಗಾದಿಗೆ ಅನೇಕ ಮಂದಿ ಘಟಾನುಘಟಿ ಶಾಸಕರು ಸಮರ್ಥರಾಗಿದ್ದರೂ, ಪಕ್ಷದ ಓರ್ವ ನೂತನ ಮಹಿಳಾ ಶಾಸಕಿಗೆ ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಹಿಡಿಯುವ ಅವಕಾಶವನ್ನು ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ಪ್ರಮುಖರಿಗೆ ಅಭಿನಂದನೆಗಳು ಎಂದರು.ಈ ಕಾರ್ಯಕ್ರಮದಲ್ಲಿ ಉಡುಪಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಜಾಲಾ ಸತೀಶ್, ತಾರಾ ಉಮೇಶ್‌ ಆಚಾರ್ಯ, ವಿದ್ಯಾ ಶ್ಯಾಮ್, ಸುಮಾ ಆರ್. ಕುಮಾರ್, ಲೀಲಾ ಆರ್. ಆಮೀನ್, ಕವಿತಾ ಪೂಜಾರಿ, ಲೀನಾ, ಉಡುಪಿ ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಧಾ ಪೈ, ಯಶೋಧಾ ರಾಜೇಂದ್ರ, ಸರೋಜಾ ಶೆಣೈ, ಆಶಲತಾ ಹೆಗ್ಡೆ, ದೀಪಾ ಪೈ, ಪ್ರಜ್ಞಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.