ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

| Published : Dec 05 2024, 12:31 AM IST

ಸಾರಾಂಶ

ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ.

ಕನ್ನಡಪ್ರಭ ವಾರ್ತೆ ಕಾರ್ಕಳ

ಮಾನಸಿಕ ಖಿನ್ನತೆ ಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ. 3ರಂದು ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿ ವರದಿಯಾಗಿದೆ.

ಹಾಲಮ್ಮ(32) ನೇಣಿಗೆ ಶರಣಾದವರು. ಇವರು ಖಿನ್ನತೆಯಿಂದ ಬಳಲುತ್ತಿದ್ದು, ಉಡುಪಿಯ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮನನೊಂದು ಮನೆಯೊಳಗೆ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.