ಬಹಿರ್ದೆಸೆಗೆ ತೆರಳಿದ್ದ ಮಹಿಳೆಗೆ ಹಾವು ಕಚ್ಚಿ ಸಾವು

| Published : Apr 30 2025, 12:36 AM IST

ಸಾರಾಂಶ

ಬಹಿರ್ದೆಸೆಗೆ ತೆರಳಿದ್ದ ಶಿವಮಲ್ಲಮ್ಮ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದರಿಂದ ಸಂಬಂಧಪಟ್ಟ ಇಲಾಖೆ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹನೂರು: ಬಹಿರ್ದೆಸೆಗೆ ತೆರಳಿದ್ದ ಮಹಿಳೆಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳ್ಳತ್ತೂರು ಗ್ರಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ಬೆಳತ್ತೂರು ಗ್ರಾಮದ ಶಿವ ಮಲ್ಲಮ್ಮ (70) ಮೃತಪಟ್ಟ ವೃದ್ಧೆಯಾಗಿದ್ದಾರೆ. ಘಟನೆಯ ವಿವರ: ಶಿವಮಲ್ಲಮ್ಮ ಬಹಿರ್ದೆಸೆಗೆಂದು ಮನೆಯ ಬಳಿ ಇರುವ ಜಮೀನಿನ ಕಡೆ ಹೋಗಿದ್ದಾಗ ಯಾವುದೋ ವಿಷಕಾರಿ ಹಾವು ಕಾಲಿಗೆ ಕಚ್ಚಿದ ಪರಿಣಾಮ ವಿಚಾರ ತಿಳಿದ ತಕ್ಷಣ ಸಮೀಪದ ಕಾಮಗೆರೆ ಹೋಲಿ ಕ್ರಾಸ್ ಬಳಿಯ ಖಾಸಗಿ ಅಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವಮಲ್ಲಮ್ಮ ಮೃತಪಟ್ಟಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೂಕ್ತ ಪರಿಹಾರಕ್ಕೆ ಒತ್ತಾಯ: ಬಹಿರ್ದೆಸೆಗೆ ತೆರಳಿದ್ದ ಶಿವಮಲ್ಲಮ್ಮ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದರಿಂದ ಸಂಬಂಧಪಟ್ಟ ಇಲಾಖೆ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.