ಜಮಖಂಡಿ ತಾಲೂಕಿನ ಹುನ್ನೂರ ಗ್ರಾಮದ ಬಸ್ ನಿಲ್ದಾಣ ಸಮೀಪದಲ್ಲಿರುವ ಹೂವಿನಸಿದ್ದ ಸರೋವರ ಕೆರೆಯಲ್ಲಿ ಬಿದ್ದು ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಕನ್ನಡಪ್ರಭ ವಾರ್ತೆ ಜಮಖಂಡಿ
ತಾಲೂಕಿನ ಹುನ್ನೂರ ಗ್ರಾಮದ ಬಸ್ ನಿಲ್ದಾಣ ಸಮೀಪದಲ್ಲಿರುವ ಹೂವಿನಸಿದ್ದ ಸರೋವರ ಕೆರೆಯಲ್ಲಿ ಬಿದ್ದು ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.ಆಸಂಗಿ ಗ್ರಾಮದ ದೀಪಾ ಮಲ್ಲಿಕಾರ್ಜುನ ಅಂಬಿ (27) ಮೃತ ಮಹಿಳೆ. ಸಿದ್ದಾಪುರ ಗ್ರಾಮದ ಪತಿಯ ಮನೆಯಲ್ಲಿ ವಾಸವಾಗಿದ್ದರು. ಸಂಬಧಿಕರೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೈಕೆಗೆಂದು ಹುನ್ನೂರಿಗೆ ಬಂದಿದ್ದರು ಎನ್ನಲಾಗಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕೆರೆಯ ದಂಡೆಯ ಮೆಟ್ಟಿಲುಗಳ ಬಳಿ ಮಹಿಳೆ ಧರಿಸಿದ್ದ ಚಪ್ಪಲಿಗಳು ಪತ್ತೆಯಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಜಮಖಂಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.