ಕನ್ನಡಪ್ರಭ ವಾರ್ತೆ ಜಮಖಂಡಿತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ಹಿಟ್ಟಿನ ಗಿರಣಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಕನ್ನಡಪ್ರಭ ವಾರ್ತೆ ಜಮಖಂಡಿ
ತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ಹಿಟ್ಟಿನ ಗಿರಣಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.ಹಿರೇಪಡಸಲಗಿ ಗ್ರಾಮದ ರೇಣುಕಾ ಸಿದ್ದಪ್ಪ ಕುರಲಚ್ಚಿ (48) ಮೃತಳು. ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆ ತೊಟ್ಟಿದ್ದ ಸೀರೆಯ ಅಂಚು ಗಿರಣಿಯ ಕಬ್ಬಿಣದ ಶ್ಯಾಫ್ಟ್‌ಗೆ ಸಿಲುಕಿಕೊಂಡ ಪರಿಣಾಮ ಅನಾಹುತ ನಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಜಮಖಂಡಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಾವಳಗಿ ಠಾಣೆ ಪಿಎಸ್‌ಐ ಅಪ್ಪಣ್ಣ ಐಗಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆದಿದೆ.
