ಚೌಡನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದ್ದು ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳ ಕಾಟದಿಂದ ಬೆಳೆಗಳು ನಾಶವಾಗಿದ್ದರು ಇದುವರೆಗೆ ಸೂಕ್ತ ಪರಿಹಾರ ಕೊಡುತ್ತಿಲ್ಲ. ಇಷ್ಟೆಲ್ಲಾ ತೊಂದರೆಗಳು ಇದ್ದರೂ ಕೂಡ ಅರಣ್ಯ ಇಲಾಖೆಯವರು ಆನೆಗಳನ್ನು ಮೇಯಲು ಬಿಟ್ಟು ತಮ್ಮ ಪಾಡಿಗೆ ತಾವು ಆರಾಮವಾಗಿ ಇದ್ದಾರೆ. ಇದೇ ರೀತಿ ಸಾವು ನೋವುಗಳು ಉಂಟಾಗುತ್ತಿದ್ದರೆ ಕಾಡಾನೆ ಹಾಗೂ ಮಾನವ ಸಂಘರ್ಷದಿಂದ. ಬೇರೆ ಯಾವುದೇ ದುರ್ಘಟನೆಗಳು ಹೆಚ್ಚಾಗುವ ಸಾಧ್ಯತೆ ಇದ ಎಂದು ಕಿಡಿಕಾರಿದರು.
ಕನ್ನಡಪ್ರಭ ವಾರ್ತೆ ಬೇಲೂರು
ತಾಲೂಕಿನ ಚೌಡನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದ್ದು ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಾಡಾನೆಗಳ ದಾಳಿಗೆ ಇನ್ನೂ ಎಷ್ಟು ಅಮಾಯಕ ಜನರು ಬಲಿಯಾಗಬೇಕು, ಅರಣ್ಯ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷದಿಂದ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈ ಬಗ್ಗೆ ಶಾಶ್ವತ ಪರಿಹಾರ ದೊರಕಿಸಿಕೊಡದಿದ್ದರೆ ತಾಲೂಕು ಹಾಗು ಜಿಲ್ಲಾ ಕೇಂದ್ರದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ತಾಲೂಕಿನ ಚೌಡನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದ್ದು ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿ, ಈ ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ಜನರು ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಸಾಲ ಮಾಡಿ ಕಷ್ಟಪಟ್ಟು ಬೆಳೆದ ಬೆಳೆಗಳನ್ನು ನಾಶಪಡಿಸಿ ರೈತರಿಗೆ ಲಕ್ಷಾಂತರ ಹಣ ನಷ್ಟ ಮಾಡುತ್ತಿವೆ. ಇನ್ನೊಂದೆಡೆ ರಸ್ತೆಯಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ನಡೆಯಬೇಕಾದ ಸ್ಥಿತಿ ಉಂಟಾಗಿದೆ. ಹೊಲ ಜಮೀನುಗಳಿಗೆ ನಾವು ತಿರುಗಾಡಲು ಸಾಧ್ಯವಾಗುತ್ತಿಲ್ಲ ಮಕ್ಕಳು ಶಾಲೆಗೆ ಹೋಗಲು ಎದುರುತ್ತಿದ್ದಾರೆ ರಾತ್ರಿ ವೇಳೆ ಮನೆಯಿಂದ ಹೊರಗೆ ಬರಲು ಆಗದ ಸ್ಥಿತಿ ನಿರ್ಮಾಣವಾಗಿದೆ. ರೋಗಿಗಳು ವೃದ್ಧರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ರಾತ್ರಿ ವೇಳೆ ಆಟೋ ಬರುವುದಿಲ್ಲ. ಕಾಡಾನೆಗಳ ಕಾಟದಿಂದ ಬೆಳೆಗಳು ನಾಶವಾಗಿದ್ದರು ಇದುವರೆಗೆ ಸೂಕ್ತ ಪರಿಹಾರ ಕೊಡುತ್ತಿಲ್ಲ. ಇಷ್ಟೆಲ್ಲಾ ತೊಂದರೆಗಳು ಇದ್ದರೂ ಕೂಡ ಅರಣ್ಯ ಇಲಾಖೆಯವರು ಆನೆಗಳನ್ನು ಮೇಯಲು ಬಿಟ್ಟು ತಮ್ಮ ಪಾಡಿಗೆ ತಾವು ಆರಾಮವಾಗಿ ಇದ್ದಾರೆ. ಇದೇ ರೀತಿ ಸಾವು ನೋವುಗಳು ಉಂಟಾಗುತ್ತಿದ್ದರೆ ಕಾಡಾನೆ ಹಾಗೂ ಮಾನವ ಸಂಘರ್ಷದಿಂದ. ಬೇರೆ ಯಾವುದೇ ದುರ್ಘಟನೆಗಳು ಹೆಚ್ಚಾಗುವ ಸಾಧ್ಯತೆ ಇದ ಎಂದು ಕಿಡಿಕಾರಿದರು. ಕಾಫಿ ಬೆಳೆಗಾರರ ಸಂಘದ ಅದ್ದೂರಿ ಚೇತನ್ ಮಾತನಾಡಿ, ಕಾಡಾನೆಗಳಿಂದ ಸಾವು ಸಂಭವಿಸಿದಾಗ ಮಾತ್ರ ಅರಣ್ಯ ಇಲಾಖೆ ಹಾಗೂ ಸರ್ಕಾರ ಜಾಗೃತಗೊಂಡು ಒಂದಷ್ಟು ಪರಿಹಾರವನ್ನು ಕೊಟ್ಟು ಸುಮ್ಮನಾಗಿಸುತ್ತವೆ. ನಂತರ ಮತ್ತೆ ಕಾಡಾನೆಗಳ ಕಾಟಕ್ಕೆ ಯಾವುದೇ ಪರಿಹಾರ ಹುಡುಕುವುದಿಲ್ಲ. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ ಬಿಳಿ ಕಾಗದದ ಮೇಲೆ ಹಾಗೆ ಇದೆ. ಇನ್ನು ಈ ಭಾಗದ ರೈತರು ಬೆಳೆಗಾರರು ಸುಮ್ಮನೆ ಇರಲು ಸಾಧ್ಯವೇ ಇಲ್ಲ. ಸಮಸ್ಯೆಗೆ ಪರಿಹಾರ ಸಿಗುವವರೆಗೆ ಉಗ್ರ ಪ್ರತಿಭಟನೆಯ ದಾರಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.