ಸಾರಾಂಶ
Woman tied to a tree and attacked
ದೇವದುರ್ಗ:ವ್ಯಕ್ತಿಯೊಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಕಾರಣ ಮೃತನ ಸಂಬಂಧಿಕರು ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿದ ಘಟನೆ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೂರ್ಚೆ ರೋಗದಿಂದ ಬಳಲುತ್ತಿದ್ದ ಜಾಲಹಳ್ಳಿಯ ರಂಗಪ್ಪ (45) ಕಳೆದ 20 ದಿನಗಳ ಹಿಂದೆ ಮೃತಪಟ್ಟಿದ್ದು, ಈ ಸಮಯದಲ್ಲಿ ಮಹಿಳೆ ಜೊತೆಗಿದ್ದಳು ಎಂದು ಆರೋಪಿಸಿ ಮೃತನ ಸಂಬಂಧಿಕರು ಹಾಗೂ ಗ್ರಾಮದ ಕೆಲವರು ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಪು ಸೇರಿದ್ದ ಜನರನ್ನು ಚದುರಿಸಿ ಮಹಿಳೆಯನ್ನು ರಕ್ಷಿಸಿದ್ದು, ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಹಲ್ಲೆ ನಡೆಸುತ್ತಿದ್ದ ಸಮಯದಲ್ಲಿ ನೂರಾರು ಜನರು ಸೇರಿದ್ದರು ಆಕೆಯ ರಕ್ಷಣೆಗೆ ಮುಂದಾಗಿಲ್ಲ ಇದೀಗ ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೊಂಡಿದೆ.