ಮಹಿಳೆಗೆ ಇಲಿ ಜ್ವರ: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

| Published : Nov 21 2024, 01:00 AM IST

ಸಾರಾಂಶ

ಅದಾಪುರ ಗ್ರಾಮದಲ್ಲಿ ಮಹಿಳೆಯೊಬ್ಬರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು, ಅಸ್ವಸ್ಥೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ದಾವಣಗೆರೆ: ಹರಿಹರ ತಾಲೂಕಿನ ಅದಾಪುರ ಗ್ರಾಮದಲ್ಲಿ ಮಹಿಳೆಯೊಬ್ಬರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು, ಅಸ್ವಸ್ಥೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಹಿಳೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ ಹರಿಹರ ತಾಲೂಕು ವೈದ್ಯಾಧಿಕಾರಿಗಳು, ಸಿಬ್ಬಂದಿ ಅದಾಪುರ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಇಲಿ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದು, ಹರಿಹರ ತಾಲೂಕು ವೈದ್ಯಾಧಿಕಾರಿ ಡಾ.ಅಬ್ದುಲ್ ಖಾದರ್ ಸೇರಿ ವೈದ್ಯರು, ಸಿಬ್ಬಂದಿ, ಸೇರಿದಂತೆ ಅಧಿಕಾರಿಗಳ ತಂಡ ಭೇಟಿ ನೀಡಿ, ಇಲಿ ಜ್ವರ ನಿಯಂತ್ರಣ, ನಿರ್ಮೂಲನೆಗೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ಜಾಗೃತಿ ಮೂಡಿಸಿದರು.

ಮನೆಗಳಲ್ಲಿ, ಹೊಟೆಲ್, ಅಂಗಡಿಗಳಲ್ಲಿ ಆಹಾರ ಪದಾರ್ಥ, ತಿಂಡಿ, ತಿನಿಸುಗಳು, ಆಹಾರ ಧಾನ್ಯಗಳನ್ನು ಸುರಕ್ಷಿತವಾಗಿ ಮುಚ್ಚಿಡುವಂತೆ ಹಾಗೂ ಸ್ವಚ್ಛತೆ ಕಾಪಾಡಲು ಸೂಚನೆ ನೀಡಿದ್ದಾರೆ. ಇಲಿಗಳಿಂದ ಆಹಾರ ಪದಾರ್ಥಗಳನ್ನು ಸುರಕ್ಷಿತವಾಗಿಡಬೇಕು. ತಿಂಡಿ, ತಿನಿಸು, ಆಹಾರ ಪದಾರ್ಥಗಳ ಮೇಲೆ ಇಲಿಗಳು ಮೂತ್ರ ಮಾಡುವುದರಿಂದ ಇಲಿ ಜ್ವರ ಬರುತ್ತದೆ. ಸ್ವಚ್ಛತೆ ಹಾಗೂ ಸುರಕ್ಷೆತೆಯ ಕಡೆಗೆ ಗಮನಹರಿಸುವಂತೆ ಗ್ರಾಮಸ್ಥರಿಗೆ ಆರೋಗ್ಯ ಇಲಾಖೆ, ಗ್ರಾಪಂ ವತಿಯಿಂದ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ.