ಎಲ್ಲ ರಂಗಗಳಲ್ಲೂ ಮಹಿಳೆ ಮುಂದು

| Published : Mar 17 2024, 02:00 AM IST

ಸಾರಾಂಶ

ತಾಳಿಕೋಟೆ: ಸನಾತನ ಧರ್ಮದೊಂದಿಗೆ ಮುನ್ನಡೆಯುತ್ತಾ ಸಾಗಿದ ಭಾರತೀಯ ಸಂಸ್ಕೃತಿಯು ಮಹಿಳೆಯರಿಗೆ ಉನ್ನತವಾದ ಸ್ಥಾನ, ಗೌರವ ನೀಡಿದೆ ಎಂದು ಗುಂಡಕನಾಳ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾ ಸ್ವಾಮಿಗಳು ಹೇಳಿದರು.

ಕನ್ನಡಪ್ರಭ ವಾರ್ತೆ ತಾಳಿಕೋಟೆ

ಸನಾತನ ಧರ್ಮದೊಂದಿಗೆ ಮುನ್ನಡೆಯುತ್ತಾ ಸಾಗಿದ ಭಾರತೀಯ ಸಂಸ್ಕೃತಿಯು ಮಹಿಳೆಯರಿಗೆ ಉನ್ನತವಾದ ಸ್ಥಾನ, ಗೌರವ ನೀಡಿದೆ ಎಂದು ಗುಂಡಕನಾಳ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾ ಸ್ವಾಮಿಗಳು ಹೇಳಿದರು.

ಸ್ಥಳೀಯ ಶ್ರೀ ದೇವಿ ಮಾತೃ ಮಂಡಳಿ, ಹಿಂದೂ ಮಹಾ ಗಣಪತಿ ಮಹಾ ಮಂಡಳಿಯವರ ವತಿಯಿಂದ ಶ್ರೀ ವಿಠ್ಠಲ ಮಂದಿರದಲ್ಲಿ ಏರ್ಪಡಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ನಮ್ಮ ಭಾರತೀಯ ಸಂಸ್ಕೃತಿಯು ಮಹಿಳೆಯರಿಗೆ ಅಗ್ರಸ್ಥಾನ ನೀಡಿದೆ. ಮಹಿಳೆಯರನ್ನು ಗೌರವಿಸುತ್ತಾ ಸಾಗಿಬಂದಿದೆ. ಪುರುಷರಿಗಿಂತ ಮಹಿಳೆ ಯಾವುದಕ್ಕೂ ಕಡಿಮೆ ಇಲ್ಲ ಎಂಬುವುದನ್ನು ಮಹಿಳೆ ಸಾಧಿಸಿ ತೋರಿಸಿದ್ದಾಳೆ ಎಂದರು.

ಇನ್ನೋರ್ವ ಜಿಲ್ಲಾ ಪಾಲಕರ ಸಂಘದ ಉಪಾಧ್ಯಕ್ಷೆ ಶಿಲ್ಪಾ ಕುದರಗುಂಡ ಅವರು ಮಾತನಾಡಿ, ಮಹಿಳೆ ಅಬಲೆ ಅಲ್ಲ; ಸಬಲೆಯಾಗಿದ್ದಾಳೆ ಯಾವುದಕ್ಕೂ ಕಡಿಮೆ ಇಲ್ಲ ಎಂಬುದನ್ನು ಇಂದಿನ ದಿನಮಾನದಲ್ಲಿ ಮುನ್ನುಗ್ಗಿದನ್ನು ನೋಡಿದರೆ ಎಲ್ಲವೂ ಅರ್ಥವಾಗುತ್ತದೆ ಎಂದು ಹೇಳಿದರು.ಇನ್ನೋರ್ವ ವೀರಶೈವ ಲಿಂಗಾಯತ ಸಮಾಜದ ಗೌರವಾಧ್ಯಕ್ಷ ಶಿವಶಂಕರ ಹಿರೇಮಠ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಸಂಘಟಿಸಿದ ಶ್ರೀ ದೇವಿ ಮಾತೃ ಮಂಡಳಿಯ ಉಸ್ತುವಾರಿಯಾದ ಶಿವಮ್ಮ ಬಿರಾದಾರ ಅವರು ಉಪಸ್ಥಿತ ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಆದರ್ಶ ಮಹಿಳೆಯರಿಗೆ, ವಿವಿಧ ಮಹಿಳಾ ಮಂಡಳದ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಪುರಸಭೆಯ ಪೌರ ಕಾರ್ಮಿಕರಿಗೆ, ಶಾಲು ಹೊದಿಸಿ ಸನ್ಮಾನಿಸಿದರು.