ಸಾರಾಂಶ
ಇಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನದೇ ಆದ ಛಾಪು ಮೂಡಿಸಿರುವ ಮಹಿಳೆಯರು ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಸಂಕೇತವಾಗಿದ್ದಾರೆ.
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು
ಇಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನದೇ ಆದ ಛಾಪು ಮೂಡಿಸಿರುವ ಮಹಿಳೆಯರು ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಸಂಕೇತವಾಗಿದ್ದಾರೆ ಎಂದು ಓಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರುಕ್ಮಿಣಿಬಾಯಿ ಸಾವಕಾರ ಹೇಳಿದರು.ನಗರದ ಕಾಕಿ ಸಮುದಾಯ ಭವನದ ಗಣೇಶೋತ್ಸವ ಅರಮನೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಾಣಿಬೆನ್ನೂರು-2 ಯೋಜನಾ ಕಚೇರಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆ ಮನಃ ಪರಿವರ್ತನೆಯ ಶಕ್ತಿ ಹೊಂದಿದ್ದಾಳೆ. ತಾಯಿ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡಬೇಕು ಅಂದಾಗ ಮಾತ್ರ ಸಮಾನತೆ ಕಾಣಲು, ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಜನಜಾಗೃತಿ ವೇದಿಕೆ ಅಧ್ಯಕ್ಷೆ, ನ್ಯಾಯವಾದಿ ವನಿತಾ ಗುತ್ತಲ ಮಾತನಾಡಿ, ಪಾಶ್ಚಿಮಾತ್ಯ ಸಂಸ್ಕೃತಿಯ ಅಂಧಾನುಕರೆಣೆಯು ನಮ್ಮ ಜೀವನ ಹಾಗೂ ನಮ್ಮ ನೈಜ ಬದುಕನ್ನು ಕಸಿದುಕೊಳ್ಳುತ್ತಿದೆ. ಇದರಿಂದ ಸಂಸ್ಕೃತಿ, ಸಂಸ್ಕಾರದಿಂದ ವಿಮುಖರಾಗುವಂತಾಗಿದೆ ಎಂದರು.ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರ ಪಾತ್ರ ವಿಷಯ ಕುರಿತು ನಿವೃತ್ತ ಶಿಕ್ಷಕ ಸಿದ್ದಪ್ಪ ಬಾತಿ ಉಪನ್ಯಾಸ ನೀಡಿದರು.
ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಮಾತನಾಡಿದರು.ಚಳಗೇರಿ ಗ್ರಾಪಂ ಸದಸ್ಯೆ ಭಾರತಿ ಕರ್ಜಗಿ, ಕ್ಷೇತ್ರ ಯೋಜನಾಧಿಕಾರಿ ಮಂಜುನಾಥ ಎಂ.ಪಿ., ಒಕ್ಕೂಟದ ಅಧ್ಯಕ್ಷೆ ಸಾವಿತ್ರಮ್ಮ ಹೊಸರಿತ್ತಿ, ನಿಂಗರಾಜ, ಶೃತಿ, ಜಗದೀಶ ಸುರ್ವೆ, ರೇಣುಕಾ ಮತ್ತಿತರರಿದ್ದರು.