ಸರ್ಕಾರ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆಗಳು ಇದ್ದು ಅದರಲ್ಲೂ ಮಹಿಳೆಯರಿಗೆ ಅನೇಕ ಕಾರ್ಯಕ್ರಮಗಳು ಇದ್ದು ಇದರ ಸದುಪಯೋಗ ಪಡೆಯಬೇಕು.

ಕನ್ನಡಪ್ರಭ ವಾರ್ತೆ ಕೋಲಾರಸರ್ಕಾರ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಈ ಯೋಜನೆಗಳ ಪ್ರಯೋಜನ ಪಡೆದು ಮಹಿಳೆಯರು ಆರ್ಥಿಕ ಸಬಲೀಕರಣದೊಂದಿಗೆ ಸ್ವಾವಲಂಬಿ ಬದುಕು ಸಾಗಿಸಲು ಮುಂದೆ ಬರಬೇಕು ಎಂದು ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಕರೆ ನೀಡಿದರು.ತಾಲೂಕಿನ ವೇಮಗಲ್ ಶ್ರೀ ದ್ರೌಪತಾಂಬ ಧರ್ಮರಾಯಸ್ವಾಮಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆಗಳು ಇದ್ದು ಅದರಲ್ಲೂ ಮಹಿಳೆಯರಿಗೆ ಅನೇಕ ಕಾರ್ಯಕ್ರಮಗಳು ಇದ್ದು ಇದರ ಸದುಪಯೋಗ ಪಡೆಯಬೇಕು. ಮಹಿಳೆ ನಿಶ್ಚಿಂತೆಯಿಂದ ತನ್ನ ಬದುಕು ಕಟ್ಟಿಕೊಳ್ಳಲು ಲೋಕ ಜ್ಞಾನ ಹೊಂದಿರಬೇಕು. ಈ ಕಾರಣದಿಂದಾಗಿ ಮಹಿಳಾ ಜ್ಞಾನ ವಿಕಾಸ ಕೇಂದ್ರ ಮಹಿಳೆಯರಿಗೆ ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಸ್ವಯಂ ಉದ್ಯೋಗ ಸೇರಿದಂತೆ ವಿವಿಧ ಸಾಮಾಜಿಕ ಜ್ಞಾನ ಕುರಿತಂತೆ ಮಾಹಿತಿ ನೀಡಿ ಜಾಗೃತಿಗೊಳಿಸುವ ಇಂತಹ ಕಾರ್ಯಕ್ರಮ ಜೊತೆಗೆ ನಿರ್ಗತಿಕರರಿಗೆ ಮನೆ ರಚನೆಯ ವಾತ್ಸಲ್ಯ ಕಾರ್ಯಕ್ರಮ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಮ್ಮ ಸಮಾಜಕ್ಕೆ ಮಾದರಿ ಎಂದು ತಿಳಿಸಿದರು.ಹಿರಿಯ ವಕೀಲರಾದ ರತ್ನಗೌಡ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಹಿಂದೆ ನಾಲ್ಕು ಗೋಡೆಗಳ ನಡುವೆ ಬಂಧಿತರಾಗಿದ್ದ ಮಹಿಳೆಯರು ಈಗ ಸಮಾಜದ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯ ತೋರಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಶಿವಾನಂದ್ ಆಚಾರ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅನುಷಾ, ಗೌಡ್ರು ಚಿಕ್ಕ ಮುನಿಯಪ್ಪ, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಬೆಳಮಾರನಹಳ್ಳಿ ಚಂದ್ರಶೇಖರ್, ವನ್ನಿಕುಲದ ಮುಖಂಡರಾದ ಶ್ರೀ ವೆಂಕಟೇಶ್, ಮುಖಂಡರಾದ ನಾಗೇಶ್ ಇದ್ದರು. ತಾಲೂಕು ಯೋಜನಾಧಿಕಾರಿ ರಘು ಸ್ವಾಗತಿಸಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶಿಲ್ಪಾ ನಿರೂಪಿಸಿ, ಮೇಲ್ವಿಚಾರಕ ಮಂಜುನಾಥ್ ವಂದಿಸಿದರು.