ಅಡುಗೆಮನೆಗೆ ಸೀಮಿತವಾಗಿದ್ದ ಮಹಿಳೆಯರು ಇಂದಿನ ದಿನಗಳಲ್ಲಿ ದೇಶ ರಕ್ಷಣೆಯ ಸೇನೆಯಲ್ಲಿ ಸಹ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ, ಜ್ಞಾನ, ವಿಜ್ಞಾನ, ತಂತ್ರಜ್ಞಾನ, ರಾಜಕೀಯ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮದೇ ಆದ ಸಾಧನೆಗಳನ್ನು ಮಾಡುತ್ತಿರುವುದು ಇತರರಿಗೆ ಪ್ರೇರಣೆಯಾಗುತ್ತಿದೆ. ದುಡಿಯುವ ಮನೋಭಾವ ಹೊಂದಿರುವ ಮಹಿಳೆಯರಿಗೆ ಗಾರ್ಮೆಂಟ್ಸ್ ಕ್ಷೇತ್ರ ಉತ್ತಮ ಅವಕಾಶಗಳನ್ನು ನೀಡುತ್ತಿದೆ ಎಂದರು. ಮಹಿಳೆಯರು ಸಂಪಾದನೆ ಜೊತೆಗೆ ತಮ್ಮ ಆರೋಗ್ಯದತ್ತಲೂ ಗಮನ ಹರಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಜವಾಬ್ದಾರಿಯನ್ನೂ ಸಮರ್ಪಕವಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಿದರು.

ಅರಸೀಕೆರೆ: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಶಕ್ತಿವಂತಳಾಗುವ ಮೂಲಕವೇ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ವಿಕಸನ ಸಂಸ್ಥೆಯ ಸಿಇಒ ವಿಭಾ ವರ್ಗೀಸ್ ಅಭಿಪ್ರಾಯಪಟ್ಟರು.

ತಾಲೂಕಿನ ಬೆಂಡೇಕೆರೆ ಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾರಿ ಶಕ್ತಿ ಶತಮಾನಗಳಿಂದಲೇ ಸಮಾಜದಲ್ಲಿ ತನ್ನ ಮಹತ್ವವನ್ನು ಸಾಬೀತುಪಡಿಸಿದೆ ಎಂದು ಹೇಳಿದರು. ಅಡುಗೆಮನೆಗೆ ಸೀಮಿತವಾಗಿದ್ದ ಮಹಿಳೆಯರು ಇಂದಿನ ದಿನಗಳಲ್ಲಿ ದೇಶ ರಕ್ಷಣೆಯ ಸೇನೆಯಲ್ಲಿ ಸಹ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ, ಜ್ಞಾನ, ವಿಜ್ಞಾನ, ತಂತ್ರಜ್ಞಾನ, ರಾಜಕೀಯ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮದೇ ಆದ ಸಾಧನೆಗಳನ್ನು ಮಾಡುತ್ತಿರುವುದು ಇತರರಿಗೆ ಪ್ರೇರಣೆಯಾಗುತ್ತಿದೆ. ದುಡಿಯುವ ಮನೋಭಾವ ಹೊಂದಿರುವ ಮಹಿಳೆಯರಿಗೆ ಗಾರ್ಮೆಂಟ್ಸ್ ಕ್ಷೇತ್ರ ಉತ್ತಮ ಅವಕಾಶಗಳನ್ನು ನೀಡುತ್ತಿದೆ ಎಂದರು. ಮಹಿಳೆಯರು ಸಂಪಾದನೆ ಜೊತೆಗೆ ತಮ್ಮ ಆರೋಗ್ಯದತ್ತಲೂ ಗಮನ ಹರಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಜವಾಬ್ದಾರಿಯನ್ನೂ ಸಮರ್ಪಕವಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲ ವಿರೂಪಾಕ್ಷ ಕೌಟುಂಬಿಕ ದೌರ್ಜನ್ಯ ತಡೆ ಹಾಗೂ ಪೋಕ್ಸೋ ಪ್ರಕರಣಗಳ ಕುರಿತು ಮಾಹಿತಿ ನೀಡಿದರು. ಡಾ. ಹೇಮಾ ಆರೋಗ್ಯದ ಮಹತ್ವದ ಬಗ್ಗೆ ತಿಳಿಸಿದರು.ಈ ಸಂದರ್ಭದಲ್ಲಿ ಪ್ರಭಾವತಿ, ಕವಿತಾ ಸೇರಿದಂತೆ ಗಾರ್ಮೆಂಟ್ಸ್‌ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅನೇಕ ಮಹಿಳೆಯರು ಉಪಸ್ಥಿತರಿದ್ದರು.