ಕುಷ್ಟಗಿ: ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ತುಂಭಾ ಸಹಕಾರಿಯಾಗಿದೆ ಎಂದು ತುಂಗಭದ್ರಾ ಕಾಡಾ ನಿಗಮ ಅಧ್ಯಕ್ಷ ಹಸನಸಾಬ್ ದೋಟಿಹಾಳ ಹೇಳಿದರು.

ಪಟ್ಟಣದ ಜೆಸ್ಕಾಂ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಹಿಳಾ ಸಬಲೀಕರಣದ ಉದ್ದೇಶದಿಂದ ಮಹಿಳೆಯರಿಗಾಗಿ ರಾಜ್ಯ ಸರ್ಕಾರ ಅನೇಕ ಅಭಿವೃದ್ಧಿ ಪರ ಯೋಜನೆ ಜಾರಿಗೆ ತಂದಿದೆ. ₹28 ಸಾವಿರ ಕೋಟಿ ಅನುದಾನ ನೀಡಿದೆ. ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ. ಗ್ಯಾರಂಟಿ ಅನುಷ್ಠಾನ ಇಲಾಖೆ ಅಧಿಕಾರಿಗಳು ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಗ್ರಾಮೀಣ ಭಾಗದ ಮಹಿಳೆಯರಿಗೆ ಅರಿವು ಮೂಡಿಸಿ, ಮುಂದಿನ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಶಿಕ್ಷಕ ಜೀವನಸಾಬ್‌ ಬಿನ್ನಾಳ ಗ್ಯಾರಂಟಿ ಯೋಜನೆಗಳ ಕುರಿತು ಉಪನ್ಯಾಸ ನೀಡಿ, ರಾಜ್ಯದ ಜನರಲ್ಲಿ ಗ್ಯಾರಂಟಿ ಯೋಜನೆ ಆತ್ಮವಿಶ್ವಾಸ ಮೂಡಿಸಿವೆ. ರಾಜ್ಯದಲ್ಲಿರುವ ಶೇ.49.1ರಷ್ಟು ಮಹಿಳೆಯರಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿ ಲಾಭ ಪಡೆಯುತ್ತಿದ್ದಾರೆ. ಈ ಗೃಹಲಕ್ಷ್ಮೀ ಯೋಜನೆಯ ಹಣ ಮನೆಯ ಜವಾಬ್ದಾರಿ ನಿರ್ವಹಣೆಗೆ ಸಹಾಯವಾಗಲಿದೆ ಎಂದರು. ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಹಾಗೂ ಗ್ಯಾರಂಟಿ ಸಮಿತಿಯ ಸದಸ್ಯರು ಅಭಿಪ್ರಾಯ ಹಂಚಿಕೊಂಡರು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಫಾರೂಕ್ ಡಾಲಾಯತ್, ಜಿಲ್ಲಾ ಉಪಾಧ್ಯಕ್ಷ ಅಮರೇಶ ಗಾಂಜಿ, ಜಿಲ್ಲಾ ಸದಸ್ಯೆ ಶಾರದಾ ಕಟ್ಟಿಮನಿ, ತಾಲೂಕು ಸಮಿತಿ ಸದಸ್ಯ ಶೋಭಾ ಪುರ್ತಗೇರಿ, ಮಂಜುನಾಥ ತೆವರನ್ನವರು, ನರಸಪ್ಪ ಬಿಂಗಿ, ಹುಸೇನಸಾಬ್‌ ಕಾಯಿಗಡ್ಡಿ, ಬಾಳಪ್ಪ ಅರಳಿಕಟ್ಟಿ, ಮಹಿಬೂಬಿ ಕುರಡಗೇರಿ, ನಾಗರಾಜ ಭಜಂತ್ರಿ, ತಾಪಂ ಸಹಾಯಕ ನಿರ್ದೇಶಕಿ ಗೀತಾ ಅಯ್ಯಪ್ಪನವರು. ತಾಪಂ ಸಿಬ್ಬಂದಿ ಸಂಗಪ್ಪ ನಂದಾಪುರು ಇದ್ದರು. ಅಂಗನವಾಡಿ ಸೂಪರ್‌ವೈಸರ್ ಅನ್ನಪೂರ್ಣಾ ಪಾಟೀಲ ನಿರೂಪಿಸಿದರು.