ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

| Published : Feb 28 2025, 12:47 AM IST

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ
Share this Article
  • FB
  • TW
  • Linkdin
  • Email

ಸಾರಾಂಶ

ಸ್ತ್ರೀ ಶಕ್ತಿಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ ‘ವೀರೆ- ಸ್ತ್ರೀಶಕ್ತಿ ಸಂವರ್ಧನಾ ತರಬೇತಿ’ ಕಾರ್ಯಕ್ರಮ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಜರಗಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಮಕ್ಕಳ ಸುರಕ್ಷತೆಯ ವಿಚಾರದಲ್ಲಿ ಸಮಾಜದ ಮತ್ತು ಶಿಕ್ಷಣ ಸಂಸ್ಥೆಗಳ ಪಾತ್ರ ಮುಖ್ಯ ಎಂದು ಮೂಡುಬಿದಿರೆ ಪೋಲೀಸ್ ಠಾಣಾ ಉಪನಿರೀಕ್ಷಕಿ ಪ್ರತಿಭಾ ಹೇಳಿದ್ದಾರೆ.

ಸ್ತ್ರೀ ಶಕ್ತಿಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ ‘ವೀರೆ- ಸ್ತ್ರೀಶಕ್ತಿ ಸಂವರ್ಧನಾ ತರಬೇತಿ’ ಕಾರ್ಯಕ್ರಮ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಜರಗಿದ್ದು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣುಮಕ್ಕಳ ಸುರಕ್ಷತೆಯ ಅವಶ್ಯಕತೆ, ಅವರ ಆತ್ಮವಿಶ್ವಾಸ ಹೆಚ್ಚಿಸಲು ತರಬೇತಿಗಳ ಮಹತ್ವ, ಅವರ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಾಚಾರ್ಯ ಎಸ್. ಜಿ. ಹಿರೇಮಠ್ ಅವರು ಮಕ್ಕಳಲ್ಲಿ ಸ್ವಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ತರಬೇತಿ ಪ್ರಮುಖ ಪಾತ್ರ ವಹಿಸಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್‌ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್‌ ಮಾತನಾಡಿ, ಹೆಣ್ಣು ದೈಹಿಕ ಮತ್ತು ಮಾನಸಿಕವಾಗಿ ಸಬಲಳಾದಾಗ ಸಮಾಜ ಸಶಕ್ತವಾಗಿ ರೂಪುಗೊಳ್ಳುತ್ತದೆ. ಹೆಣ್ಣು ಮಕ್ಕಳು ತಮ್ಮ ಹಕ್ಕುಗಳು, ಅವಕಾಶಗಳು ಮತ್ತು ಸಬಲೀಕರಣದ ಬಗ್ಗೆ ಅರಿವು ಹೊಂದಿದಾಗ ಮಾತ್ರ ಸಮಾನತೆಯ ಸಮಾಜ ನಿರ್ಮಿಸಬಹುದು ಎಂದರು.

ಸಭಾ ಕಾರ್ಯಕ್ರಮದ ನಂತರ ಇಂಚರ ಫೌಂಡೇಷನ್ ಸಂಸ್ಥೆಯ ಸಿಬ್ಬಂದಿ ತರಬೇತಿ ನೀಡಿದರು.

ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಭಾರ ನಿಲಯ ಪಾಲಕಿ ಆಶಾಲತಾ ಮತ್ತು ವಿದ್ಯಾರ್ಥಿ ಪ್ರತಿನಿಧಿ ಚೈತ್ರಾ ಪಾಟೀಲ್ ಉಪಸ್ಥಿತರಿದ್ದರು. ಉಪನ್ಯಾಸಕ ತೇಜಸ್ವೀ ಭಟ್ ನಿರೂಪಿಸಿದರು.