ಮಹಿಳೆಯರಿಗೆ ಹಲವು ಕ್ಷೇತ್ರಗಳಲ್ಲಿ ಉತ್ತಮ ಅವಕಾಶ-ನ್ಯಾಯಾಧೀಶ ವೈ.ಕೆ. ಬೇನಾಳ

| Published : Mar 30 2024, 12:47 AM IST

ಮಹಿಳೆಯರಿಗೆ ಹಲವು ಕ್ಷೇತ್ರಗಳಲ್ಲಿ ಉತ್ತಮ ಅವಕಾಶ-ನ್ಯಾಯಾಧೀಶ ವೈ.ಕೆ. ಬೇನಾಳ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಸ್ತುತದಲ್ಲಿ ಮಹಿಳೆಯರಿಗೆ ಸಾಕಷ್ಟು ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರಾದ ವೈ.ಕೆ. ಬೇನಾಳ ಹೇಳಿದರು.

ಹಿರೇಕೆರೂರು: ಪ್ರಸ್ತುತದಲ್ಲಿ ಮಹಿಳೆಯರಿಗೆ ಸಾಕಷ್ಟು ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರಾದ ವೈ.ಕೆ. ಬೇನಾಳ ಹೇಳಿದರು.ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಲ ದಿನಾಚರಣೆ ಅಂಗವಾಗಿ ನಡೆದ ಕಾನೂನು ಸಾಕ್ಷರತಾ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ವರ್ಷ ವಿಶ್ವದೆಲ್ಲೆಡೆ ಮಹಿಳಾ ದಿನಾಚರಣೆ ಆಚರಿಸುವ ಮೂಲಕ ಮಹಿಳೆಯರು ಆರ್ಥಿಕ, ಸಾಮಾಜಿಕ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಗಳನ್ನು ನೆನೆಯಲಾಗುತ್ತದೆ. ಮಹಿಳೆ ಎಲ್ಲಾ ರಂಗದಲ್ಲೂ ಉನ್ನತ ಸ್ಥಾನಕ್ಕೆ ಏರುತ್ತಿದ್ದಾರೆ. ಮಹಿಳೆಯರಿಗಾಗಿರುವ ಎಲ್ಲಾ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.ನೀರು ಅಮೂಲ್ಯವಾಗಿದ್ದು, ಪ್ರತಿಯೊಬ್ಬರು ಅನವಶ್ಯಕವಾಗಿ ನೀರು ಪೋಲು ಮಾಡದೇ ನೀರನ್ನು ಸಂರಕ್ಷಣೆ ಮಾಡಬೇಕು. ಮಿತವ್ಯವಾಗಿ ನೀರನ್ನು ಬಳಕೆ ಮಾಡಬೇಕು. ಜಲ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದರುಎಸಿಡಿಪಿಒ ಗೀತಾ ಬಾಳಿಕಾಯಿ, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಕೆ.ಬಿ. ಬಾಳಿಕಾಯಿ, ಕಾರ್ಯದರ್ಶಿ ಡಿ.ಟಿ.ತಿರಕಪ್ಪನವರ, ನ್ಯಾಯವಾದಿಗಳಾದ ಎ.ಎ.ಎಲಿವಾಳ, ಹೇಮಾ ಬೆಳ್ಳೂರ, ಎಚ್.ಎಂ. ನಂದಿಹಳ್ಳಿ, ಪವಿತ್ರಾ ಪಾಟೀಲ, ರೋಜಾ ಬೋಸೇರ ಸೇರಿದಂತೆ ನ್ಯಾಯವಾದಿಗಳ ಸಂಘದ ಸದಸ್ಯರು ನ್ಯಾಯಾಲಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.