ಮಹಿಳೆಯರು ಖಾಲಿ ಬಿಂದಿಗೆಗಳನ್ನು ಹಿಡಿದು ನೀರಿಗಾಗಿ ಕಾಯುವಂತಹ ಪರಿಸ್ಥಿತಿ ಉಂಟಾಗಿದೆ. ಗ್ರಾಮಕ್ಕೆ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಗೆ ನಿವಾಸಿಗಳು ತಿಳಿಸಿ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಿದ್ದರು. ಇಲ್ಲಿನ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಯ ಇಚ್ಛಾಶಕ್ತಿ ಕೊರತೆಯಿಂದ ಹನಿ ನೀರಿಗಾಗಿ ಪರದಾಡುವಂಥ ಪರಿಸ್ಥಿತಿ ಇರುವುದರಿಂದ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಹನೂರು: ಕುಡಿಯುವ ನೀರಿಗಾಗಿ ಮಹಿಳೆಯರು ರಾತ್ರಿ ಜಾಗರಣೆ ಮಾಡುವಂಥ ಸ್ಧಿತಿ ನಿರ್ಮಾಣವಾಗಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ, ಇಚ್ಛಾಶಕ್ತಿ ಕೊರತೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ತಾಲೂಕು ವ್ಯಾಪ್ತಿ ಮಣಗಳ್ಳಿ ಗ್ರಾಪಂ ವ್ಯಾಪ್ತಿ ಬೈರನತ್ತ ಗ್ರಾಮದ ನೂತನ ಬಡಾವಣೆಯಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯಲು ನೀರಿಲ್ಲದೆ ಮಹಿಳೆಯರು ಕೆಲಸ ಕಾರ್ಯಗಳನ್ನು ಬಿಟ್ಟು ರಾತ್ರಿ- ಹಗಲು ಎನ್ನದೆ ಕುಡಿಯುವ ಹನಿ ನೀರಿಗಾಗಿ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಮಹಿಳೆಯರು ಖಾಲಿ ಬಿಂದಿಗೆಗಳನ್ನು ಹಿಡಿದು ನೀರಿಗಾಗಿ ಕಾಯುವಂತಹ ಪರಿಸ್ಥಿತಿ ಉಂಟಾಗಿದೆ. ಗ್ರಾಮಕ್ಕೆ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಗೆ ನಿವಾಸಿಗಳು ತಿಳಿಸಿ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಿದ್ದರು. ಇಲ್ಲಿನ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಯ ಇಚ್ಛಾಶಕ್ತಿ ಕೊರತೆಯಿಂದ ಹನಿ ನೀರಿಗಾಗಿ ಪರದಾಡುವಂಥ ಪರಿಸ್ಥಿತಿ ಇರುವುದರಿಂದ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಸಂಬಂಧಪಟ್ಟ ಜಿಲ್ಲಾಡಳಿತ ಇತ್ತ ಗಮನಹರಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಗ್ರಾಮದ ಗುರುಮಲ್ಲಮ್ಮ, ಪಾರ್ವತಮ್ಮ, ರಾಜಮ್ಮ ,ಭಾಗ್ಯಮ್ಮ ಇನ್ನಿತರ ಮಹಿಳೆಯರು ಎಚ್ಚರಿಕೆ ನೀಡಿದ್ದಾರೆ.