ಸಾರಾಂಶ
ಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿರುವುದರಿಂದ ಅಂಬೇಡ್ಕರ್ ಮತ್ತು ಸಂವಿಧಾನದ ಆಶಯದಂತೆ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿಯನ್ನು ಶೇ. 50ಕ್ಕೆ ಹೆಚ್ಚಿಸಬೇಕು ಎಂದು ಬಿ ಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಒತ್ತಾಯಿಸಿದರು.
- ನಗರದ ಬಿಎಸ್ ಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿರುವುದರಿಂದ ಅಂಬೇಡ್ಕರ್ ಮತ್ತು ಸಂವಿಧಾನದ ಆಶಯದಂತೆ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿಯನ್ನು ಶೇ. 50ಕ್ಕೆ ಹೆಚ್ಚಿಸಬೇಕು ಎಂದು ಬಿ ಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಒತ್ತಾಯಿಸಿದರು.
ಜಿಲ್ಲಾ ಸಹೋದರತ್ವ ಸಮಿತಿ ಮತ್ತು ಮಹಿಳಾ ಸಂಘ ನಗರದ ಬಿಎಸ್ ಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಲವು ವರ್ಷಗಳ ಹಿಂದೆ ಮಹಿಳೆಯರು ಕೇವಲ ಅಡುಗೆಮನೆಗಷ್ಟೇ ಸೀಮಿತವಾಗಿದ್ದರು. ಆದರೆ, ಇಂದು ಪುರುಷರಿಗೆ ಸರಿ ಸಮಾನವಾಗಿ ಶಿಕ್ಷಣ ವಂತರಾಗುವ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲೂ ದುಡಿಯುತ್ತಿದ್ದಾರೆ. ಮೀಸಲಾತಿ ಹೆಚ್ಚಳವಾದರೆ ಅವರು ಇನ್ನೂ ಹೆಚ್ಚಿನ ಸಾಧನೆ ಮಾಡುತ್ತಾರೆ ಎಂದರು. ಹೆಣ್ಣು ಸಮಾಜದ ಕಣ್ಣು, ಹೆಣ್ಣು ಹುಟ್ಟಿನ ಸಂಕೇತವಾಗಿರುವುದರಿಂದ ಅವಳಿಲ್ಲದೆ ಸಮಾಜವಿಲ್ಲ, ಹಾಗಾಗಿ ಸಮಾಜ ಹೆಣ್ಣಿಗೆ ಗೌರವ ನೀಡುವುದನ್ನು ಕಲಿಯಬೇಕು. ಅವಳ ಭಾವನೆ ಅರ್ಥಮಾಡಿಕೊಳ್ಳಬೇಕು. ಮಹಿಳೆಯರ ನೋವಿಗೆ ಸ್ಪಂದಿಸಬೇಕು ಎಂದು ಸಲಹೆ ಮಾಡಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹೋದರತ್ವ ಸಮಿತಿ ಅಧ್ಯಕ್ಷೆ ಕೆ.ಬಿ. ಸುಧಾ ಮಾತನಾಡಿ, ಮಹಿಳೆಯರು ಕೇವಲ ಅಡುಗೆ ಮನೆಗಷ್ಟೇ ಸೀಮಿತವಾಗಬಾರದು. ಅದರಿಂದ ಹೊರಬಂದು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಬೆಳೆಯಬೇಕು ಎಂದು ಕಿವಿ ಮಾತು ಹೇಳಿದರು. ಜಿಲ್ಲಾ ಸಹೋದರತ್ವ ಸಮಿತಿ ಕಳೆದ ಎಂಟು ವರ್ಷಗಳಿಂದ ಮಹಿಳೆಯರನ್ನು ಸ್ವಾಭಿಮಾನಿಗಳನ್ನಾಗಿ ಮಾಡುವ ಅವರನ್ನು ಸದೃಢಗೊಳಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ ಎಂದು ತಿಳಿಸಿದರು. ಬಿಎಸ್ಪಿ ವಿಧಾನಸಭಾ ಸಮಿತಿ ಕಾರ್ಯದರ್ಶಿ ವಸಂತಕುಮಾರ್ ಮಾತನಾಡಿದರು. ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆ ನಡೆಸಲಾಯಿತು, ವಿಜೇತರಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಸಹೋದರತ್ವ ಸಮಿತಿ ಉಪಾಧ್ಯಕ್ಷೆ ಕೆ.ಎಸ್. ಮಂಜುಳ, ಕಚೇರಿ ಕಾರ್ಯದರ್ಶಿ ಕಲಾವತಿ, ಬಿಎಸ್ ಪಿ ನಗರಾಧ್ಯಕ್ಷ ವಿಜಯಕುಮಾರ್, ನವೀನ್‌ಕುಮಾರಿ, ಗೀತಾ, ಅಸ್ಮಾ ಪರ್ವೀನ್ ಹಾಗೂ ರೇಖಾ ಉಪಸ್ಥಿತರಿದ್ದರು. 9 ಕೆಸಿಕೆಎಂ 1ಚಿಕ್ಕಮಗಳೂರಿನ ಬಿಎಸ್ ಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಕೆ.ಟಿ. ರಾಧಾಕೃಷ್ಣ ಉದ್ಘಾಟಿಸಿದರು.