ಮಹಿಳಾ ಸಹಕಾರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಮಹಿಳಾ ಸಹಕಾರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಶನಿವಾರಸಂತೆಯ ಸಾಹಿತಿ ನಯನತಾರ ಮಾತನಾಡಿ, ಯಾವುದೇ ಕ್ಷೇತ್ರವನ್ನು ಬಿಡದಂತೆ ಪುರುಷರಿಗೆ ಸರಿಸಮಾನರಾಗಿ ಎಲ್ಲದರಲ್ಲೂ ಸಾಧನೆಗೈದಿದ್ದಾರೆ. ಮಹಿಳಾ ಸಂಘದವರು, ಮಹಿಳೆಯರಿಗೆ ಉಪಯೋಗವಾಗುವ ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಳ್ಳಬೇಕು. ಸಂಘದ ಸದಸ್ಯರು ಹಾಗೂ ಸಮಾಜದಲ್ಲಿನ ಮಹಿಳೆಯರ ಸಮಸ್ಯೆಗಳನ್ನು ಪರಿಹರಿಸಲು ಎಲ್ಲರೂ ಮುಂದಾಗಬೇಕು ಎಂದರು.ಸಮಾಜದಲ್ಲಿ ಉನ್ನತ ಹುದ್ದೆಯಲ್ಲಿರುವ ಮಹಿಳೆಯರು ಇಂದಿಗೂ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ತಮ್ಮ ಸ್ವ ಪ್ರತಿಷ್ಠೆಯಿಂದ ಸಾಕಷ್ಟು ಮಹಿಳೆಯರು ಒಂಟಿ ಜೀವನ ನಡೆಸುತ್ತಿದ್ದಾರೆ. ಇದು ನಾವು ವೃದ್ಧರಾದ ಸಂದರ್ಭದ ಜೀವನಕ್ಕೆ ಸಮಸ್ಯೆಯಾಗುವುದು. ನಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ನಮಗೆ ಸ್ವಾತಂತ್ರ್ಯ ಇದ್ದರೂ, ನಮ್ಮ ಆಯ್ಕೆ ಒಂದು ಹಂತದವರೆಗೆ ಮಾತ್ರ ಇರುತ್ತದೆ. ಮಹಿಳೆಯರ ಸಾಧನೆಯ ಹಿಂದೆ ಸಾಕಷ್ಟು ಪುರುಷರ ಶ್ರಮ ಇರುತ್ತದೆ. ನಾವು ಮೊದಲು ಹೊಂದಿಕೊಂಡು ಹೋಗುವ ಮನಸ್ಥಿತಿಯನ್ನು ಬೆಳೆಸಿಕೊಂಡು, ಹೊಂದಾಣಿಕೆ ಜೀವನ ನಡೆಸಲು ಎಲ್ಲ ಮಹಿಳೆಯರು ಮುಂದಾಗಬೇಕು ಎಂದರು. ಅಧ್ಯಕ್ಷತೆಯನ್ನು ಸಂಘದ ಕಾರ್ಯಾಧ್ಯಕ್ಷೆ ಜ್ಯೋತಿ ಶುಭಾಕರ್ ವಹಿಸಿದ್ದರು. ವೇದಿಕೆಯಲ್ಲಿ ಸುಮಾ ಸುದೀಪ್, ಗಾಯತ್ರಿ ನಾಗರಾಜ್, ಗೀತಾ ರಾಜು, ಮಾಯಾ ಗಿರೀಶ್, ಪಂಕಜ ಪ್ರಭಾಕರ್, ಉಮಾ ರುದ್ರಪ್ರಸಾದ್, ಜಯಲಕ್ಷ್ಮಿ ಸುಬ್ರಮಣಿ ಹಾಗೂ ಶೈಲಾ ವಸಂತ್ ಇದ್ದರು. ಇದೇ ಸಂದರ್ಭ ಸಂಘದ ಹಿರಿಯ ಸದಸ್ಯರಾದ ಲತಾ ಮಂಜು ಹಾಗೂ 9ನೇ ಕನ್ನಡ ಸಾಹಿತ್ಯ ಸಮ್ಮೆಳನದ ಅಧ್ಯಕ್ಷರಾಗಿದ್ದ ಜಲಾಜಶೇಖರ್ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ದಿನಾಚರಣೆ ಪ್ರಯುಕ್ತ ಸಂಘದ ಸದಸ್ಯರಿಗೆ ನಡೆದ ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.