ಸಾರಾಂಶ
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತರ ಅಧ್ಯಯನ ಕೇಂದ್ರದ ಅಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತರ ಅಧ್ಯಯನ ಕೇಂದ್ರದ ಅಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ ಕಾರ್ಯಕ್ರಮ ಉದ್ಘಾಟಿಸಿ, ಮಹಿಳೆಯರು ಬಂದ ಅವಕಾಶಗಳನ್ನು ಹೇಗೆ ಸದುಪಯೋಗಿಸಿಕೊಳ್ಳಬೇಕು, ಬದುಕಿನಲ್ಲಿ ಧೈರ್ಯ ಛಲದೊಂದಿಗೆ ತಮ್ಮ ಗುರಿಯನ್ನು ಈಡೇರಿಸಿಕೊಳ್ಳುವುದರ ಬಗ್ಗೆ, ಮಹಿಳೆಯರು ಕುಟುಂಬವನ್ನು ಸಮಾಜವನ್ನು ಪೋಷಿಸುವ ರೀತಿ, ಅವರ ಮಹತ್ವ ಹಲವಾರು ಸಾಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಅಭಿವೃದ್ಧಿಯ ಬಗ್ಗೆ, ಸಾಧನೆ ಮಾಡಿದ ಮಹಿಳೆಯರ ಬಗ್ಗೆ, ಕುಟುಂಬ, ಸಮಾಜ ನಿರ್ವಹಣಾ ಕೌಶಲ್ಯಗಳ ಬಗ್ಗೆ, ಮಹಿಳೆಯರ ಮಹತ್ವದ ಕೊಡುಗೆಗಳ ಬಗ್ಗೆ ವಿವರಿಸಿದರು.ನಂತರ ಕಾಲೇಜಿನ ಬಿಎಸ್‌ಡಬ್ಲ್ಯೂ ಪದವಿ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ರ್‍ಯಾಂಕ್ ಪಡೆದಿರುವ ಶ್ರೀನಿಧಿ ಬಿ.ಎಸ್. ಅವರಿಗೆ ಸ್ಮರಣಿಕೆ ನೀಡುವುದರೊಂದಿಗೆ ಸನ್ಮಾನಿಸಲಾಯಿತು.ಸಮಾಜಕಾರ್ಯ ವಿಭಾಗದ ಉಪನ್ಯಾಸಕಿ ಸುಮತಿ ಬಿಲ್ಲವ ನಿರೂಪಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಬಿಂದು ಟಿ. ಅತಿಥಿ ಗಣ್ಯರನ್ನು ಪರಿಚಯಿಸುವುದರೊಂದಿಗೆ ಸ್ವಾಗತಿಸಿದರು. ಸಮಾಜಕಾರ್ಯ ವಿಭಾಗ ಮುಖ್ಯಸ್ಥೆ ಸುಷ್ಮಾ ಟಿ., ಕಾರ್ಯಕ್ರಮದಲ್ಲಿ ಮಹಿಳೆಯರ ಕುರಿತಾಗಿ ಗೀತೆಯನ್ನು ಹಾಡಿದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಹಾಗೂ ಕಾರ್ಯಕ್ರಮ ಆಯೋಜಿಸಿರುವ ಮಹಿಳಾ ಕೋಶ ಸಂಯೋಜಿಕೆ ಡಾ. ಆಶಾ ಸಿ. ಇಂಗಳಗಿ ವಂದಿಸಿದರು.ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ, ಭೌತಶಾಸ್ತ್ರ ವಿಭಾಗದ ಮುಖಸ್ಥೆ ಹಮೀದಾ ಭಾನು, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ರಘು ನಾಯ್ಕ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಶಾಂತ ಎನ್., ವಾಣಿಜ್ಯಶಾಸ್ತ್ರದ ಸಹ ಪ್ರಾಧ್ಯಾಪಕ ಡಾ. ಉದಯ ಶೆಟ್ಟಿ ಕೆ. ಹಾಗೂ ಬೋಧಕ/ಬೋಧಕೇತರರು ಉಪಸ್ಥಿತರಿದ್ದರು.