ಮಹಿಳಾ ದಿನಾಚರಣೆ: ಸಿರಿ ಸಂಸ್ಥೆ ಸಿಬ್ಬಂದಿ ಆರೋಗ್ಯ ತಪಾಸಣೆ ಶಿಬಿರ

| Published : Mar 12 2024, 02:05 AM IST

ಸಾರಾಂಶ

‘ಸಿರಿ ಕ್ಲಬ್’ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಜಿರೆ ಸಿರಿ ಕೇಂದ್ರ ಕಚೇರಿಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಜಿರೆ ಸಿರಿ ಕೇಂದ್ರ ಕಚೇರಿಯಲ್ಲಿ ನಡೆಯಿತು.

ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ ಎಂ. ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ‘ಈ ಶಿಬಿರದಿಂದ ಸಿರಿ ಸಂಸ್ಥೆಯಲ್ಲಿ ದುಡಿಯುವ ನೂರಾರು ಮಹಿಳಾ ಸಿಬ್ಬಂದಿ ಹಾಗೂ ಅವರ ಕುಟುಂಬದವರಿಗೆ ಬಹಳಷ್ಟು ಪ್ರಯೋಜನವಾಗಿದೆ. ಹಲವು ಮಹಿಳೆಯರು ತಮ್ಮ ನಿತ್ಯ ಜೀವನದಲ್ಲಿ ಅನುಭವಿಸುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಗುಪ್ತವಾಗಿಡುವುದರಿಂದ ಅದು ಮುಂದಕ್ಕೆ ಉಲ್ಬಣಗೊಂಡು ಪ್ರಾಣಕ್ಕೆ ಅಪಾಯವನ್ನು ತಂದೊಡ್ಡುವ ಸಂಭವವಿದೆ . ಹಾಗಾಗಿ ಯಾವುದೇ ಸಮಸ್ಯೆಯನ್ನು ಮುಕ್ತವಾಗಿ ವೈದ್ಯರ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು’ ಎಂದರು.ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್.ಜನಾರ್ಧನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಓರ್ವ ಮಹಿಳೆ ಆರೋಗ್ಯವಾಗಿದ್ದಲ್ಲಿ ಆಕೆಯ ಕುಟುಂಬ ಪರಿವಾರವೂ ಉತ್ತಮ ಆರೋಗ್ಯಪೂರ್ಣ ವಾತಾವರಣವನ್ನು ಹೊಂದಲು ಸಾಧ್ಯ ಎಂದರು.ಎಸ್.ಡಿ.ಎಂ ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ.ಅನ್ವಿತಾ, ಸಿರಿ ಕ್ಲಬ್ ಅಧ್ಯಕ್ಷೆ ವಸಂತಿ ಇದ್ದರು. ಸಿರಿ ಸಿಬ್ಬಂದಿ ಆರೋಗ್ಯ ತಪಾಸಣಾ ಕಾರ್ಯದಲ್ಲಿ ಸಹಕರಿಸಿದ ಎಸ್.ಡಿ.ಎಂ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಸಿರಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.ಆಡಳಿತ ನಿರ್ದೇಶಕ ಪ್ರಸನ್ನ ಸ್ವಾಗತಿಸಿದರು. ಗೋದಾಮು ಪ್ರಬಂಧಕ ಜೀವನ್ ಕುಮಾರ್ ನಿರೂಪಿಸಿದರು.ಸುಮಾರು 136 ಮಂದಿ ಸಿರಿ ಮಹಿಳಾ ಸಿಬ್ಬಂದಿ ಶಿಬಿರದ ಪ್ರಯೋಜನ ಪಡೆದರು.