ಮಹಿಳಾ ದಿನಾಚರಣೆಗೆ ಒಂದು ಅರ್ಥ ಬರಬೇಕಾದರೆ ಎಲ್ಲಾ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು, ಆ ಮೂಲಕ ಅವರು ಸ್ವಾಲಂಬನೆಯ, ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಬೇಕು. ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಜೀವನದ ಎಲ್ಲ ಕ್ಷೇತ್ರದಲ್ಲೂ ಪಗ್ರತಿ ಮತ್ತು ಸಮಾಜದಲ್ಲಿ ಸಮಾನತೆ ಸಾಧಿಸಬಹುದು ತುಮಕೂರು ವಿಶ್ವವಿದ್ಯಾಲಯ ಆಂಗ್ಲ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಹೇಳಿದರು.
ಕನ್ನಡಪ್ರಭ ವಾರ್ತೆ ತುಮಕೂರುಮಹಿಳಾ ದಿನಾಚರಣೆಗೆ ಒಂದು ಅರ್ಥ ಬರಬೇಕಾದರೆ ಎಲ್ಲಾ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು, ಆ ಮೂಲಕ ಅವರು ಸ್ವಾಲಂಬನೆಯ, ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಬೇಕು. ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಜೀವನದ ಎಲ್ಲ ಕ್ಷೇತ್ರದಲ್ಲೂ ಪಗ್ರತಿ ಮತ್ತು ಸಮಾಜದಲ್ಲಿ ಸಮಾನತೆ ಸಾಧಿಸಬಹುದು ತುಮಕೂರು ವಿಶ್ವವಿದ್ಯಾಲಯ ಆಂಗ್ಲ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿ ಹೇಳಿದರು.ತಾಲೂಕಿನ ಹೆಬ್ಬೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಮಹತ್ವವನ್ನು ತಿಳಿಸಿದ ಅವರು,ಜ್ಯೋತಿ ಬಾಪುಲೆಯವರು ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಬೇಕು. ಹೆಣ್ಣು ಮಕ್ಕಳಿಗೆ ಕೌಟುಂಬಿಕ ಜವಾಬ್ದಾರಿಗಳ ಜೊತೆಗೆ ಶಿಕ್ಷಣವೂ ಮುಖ್ಯ. ಶಿಕ್ಷಣದ ಮೂಲಕ ಆರಿವು.ಆರಿವಿನ ಮೂಲಕ ಸ್ವಾಲಂಬನೆ ಸಾಧಿಸಿಸುವ ಮೂಲಕ ಆರ್ಥಿಕವಾಗಿ ಸಬಲೀಕರಣರಾಗಿ ಸಬಲೀಕರಣದ ಮೂಲಕ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯಎಂದು ಹೇಳಿದರು. ಹೆಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಡಾ. ಪ್ರೀತಿಅವರು, ವೈದ್ಯಾಧಿಕಾರಿಗಳು, ಹೆಣ್ಣು ಮಕ್ಕಳ ಆರೋಗ್ಯ ಸಮಸ್ಯೆಗಳು ಮತ್ತು ಸಾಂಕ್ರಾಮಿಕ ರೋಗಗಳು ಹಾಗೂ ಅವುಗಳ ನಿಯಂತ್ರಣದ ಬಗ್ಗೆ ವಿದ್ಯಾರ್ಥಿನಿಯರಿಗೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದಪ್ರೊ.ಡಿ. ಕೃಷ್ಣಅವರು, ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿದರು.ಎಲ್ಲಾ ಹೆಣ್ಣು ಮಕ್ಕಳು ಶಿಕ್ಷಣ ಪಡೆದುಉನ್ನತ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಕೊಡುಗೆಗಳನ್ನು ನೀಡಬೇಕುಎಂದುಕರೆಕೊಟ್ಟರು. ಈ ಕಾರ್ಯಕ್ರಮವನ್ನು ನಂದ ಡಿ, ನಿರೂಪಿಸಿದರು, ಮಂಜುಳ ಬಿ.ಕೆ, ಸ್ವಾಗತ ಕೋರಿದರು, ರಾಕೇಶ್ ಎಚ್.ಕೆ. ವಂದಸಿದರು.