ಕನ್ನಡಪ್ರಭ ವಾರ್ತೆ ಬಾಗಲಕೋಟೆತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬಸವೇಶ್ವರ ಕಲಾ ಮಹಾವಿದ್ಯಾಲಯದ ಮಹಿಳಾ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬಸವೇಶ್ವರ ಕಲಾ ಮಹಾವಿದ್ಯಾಲಯದ ಮಹಿಳಾ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದೆ.ನಗರದ ನವನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪ್ರಸಕ್ತ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮಹಿಳಾ ಕಬಡ್ಡಿ ವಿಭಾಗದಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದವು. ತೀವ್ರ ಪೈಪೋಟಿಯ ನಡುವೆ ಬಸವೇಶ್ವರ ಕಲಾ ಮಹಾವಿದ್ಯಾಲಯದ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಸಾಧನೆಗೈದ ಕ್ರೀಡಾಪಟುಗಳಿಗೆ ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿಗಳಾದ ಮಹೇಶ್ಅ ಥಣಿ, ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ, ಪ್ರಾಚಾರ್ಯ ಎಸ್.ಆರ್.ಮುಗನೂರಮಠ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎಂ.ದೇವನಾಳ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.