ಸಾರಾಂಶ
‘ಅರಿವು ನಿಮಗಿರಲಿ ನೆರವು’ ಮಾಲಿಕೆಯ ೯ನೇ ಕಾರ್ಯಕ್ರಮದಲ್ಲಿ ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರಿಗೆ ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಆಹಾರ ಕ್ರಮ, ದೈನಂದಿನ ಜೀವನ ಪದ್ದತಿಯ ಬಗ್ಗೆ ತೆಕ್ಕಟ್ಟೆ ಶ್ರೀ ದೇವಿ ಕ್ಲಿನಿಕ್ ವೈದ್ಯೆ ಡಾ.ಸುಮಂಗಲ ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಕೋಟ
ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುವ ಅಗತ್ಯತೆ ಇದೆ ಎಂದು ತೆಕ್ಕಟ್ಟೆ ಶ್ರೀ ದೇವಿ ಕ್ಲಿನಿಕ್ ವೈದ್ಯೆ ಡಾ.ಸುಮಂಗಲ ಹೇಳಿದರು.ಅವರು ಇಲ್ಲಿನ ಪಂಚವರ್ಣ ಮಹಿಳಾ ಮಂಡದ ಆಶ್ರಯದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲ ಹಾಗೂ ಕೋಟ ಗ್ರಾ.ಪಂ ಸಹಯೋಗದೊಂದಿಗೆ ‘ಅರಿವು ನಿಮಗಿರಲಿ ನೆರವು’ ಮಾಲಿಕೆಯ ೯ನೇ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರಿಗೆ ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಅತಿಯಾಗಿ ಕಾಣುತ್ತಿದ್ದೇವೆ. ನಮ್ಮ ಆಹಾರ ಕ್ರಮ, ದೈನಂದಿನ ಜೀವನ ಪದ್ದತಿಯ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವ ಅಗತ್ಯ ಇದೆ ಎಂದರು.
ಕಾರ್ಯಕ್ರಮವನ್ನು ಕೋಟ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು.ಮುಖ್ಯ ಅಭ್ಯಾಗತರಾಗಿ ಕೋಟದ ಶಿಶು ಮಂದಿರ ವ್ಯವಸ್ಥಾಪಕಿ ಭಾಗ್ಯ ವಾದಿರಾಜ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಕಾರ್ಕಡ ಗೆಳೆಯರ ಬಳಗ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ತರಬೇತುದಾರೆ ಆರತಿರಾಜ್ ಮತ್ತಿತರರು ಇದ್ದರು.
ಪಂಚವರ್ಣ ಮಹಿಳಾ ಮಂಡಲ ಪ್ರಧಾನ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರು. ಸಂಚಾಲಕಿ ಸುಜಾತ ಬಾಯರಿ ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿದರು. ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ವಂದಿಸಿದರು.