ಕನ್ನಡಪ್ರಭ ವಾರ್ತೆ ಕುಶಾಲನಗರ ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ವಿಠಲ ಸಾಲಿಯಾನ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ನಡೆದ ಉಚಿತ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕಾಲ ಕಾಲಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನು ಅರಿತುಕೊಂಡು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆ ನೀಡುವಲ್ಲಿ ನಿಪುಣರಾಗಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಗಳ ಮೂಲಕ ಮಹಿಳೆಯರಿಗೆ ಹಲವು ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಅದರ ಸದುಪಯೋಗ ಪಡೆಯುವಂತೆ ಕೋರಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಕೋರಿದರು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ವನಿತಾ ಚಂದ್ರಮೋಹನ್ ಮಾತನಾಡಿ, ಮಹಿಳೆಯರು ಸಮಯ ವ್ಯರ್ಥ ಮಾಡದೆ ತಾವು ಕಲಿತಿರುವ ವಿದ್ಯೆಯನ್ನು ಬಳಸಿಕೊಂಡು ಕುಟುಂಬ ನಿರ್ವಹಣೆಯಲ್ಲಿ ಕೈಜೋಡಿಸುವಂತಾಗಬೇಕು ಎಂದು ಹೇಳಿದರು. ಉಚಿತ ತರಬೇತಿಗೆ ಸೀಮಿತರಾಗದೆ ಹೆಚ್ಚುವರಿ ತರಬೇತಿ ಪಡೆಯುವ ಮೂಲಕ ಮುಂದುವರಿದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಶಿಬಿರಾರ್ಥಿಗಳಿಗೆ ಒಂದು ತಿಂಗಳ ಕಾಲ ತರಬೇತಿ ನೀಡಿದ ಸೌಂದರ್ಯ ತಜ್ಞರಾದ ಸಿಂಚನ ಪ್ರೀತಂ ಶೆಟ್ಟಿ ಅವರನ್ನು ಗೌರವಿಸಲಾಯಿತು. ಶಿಬಿರದಲ್ಲಿ ತರಬೇತಿ ಪಡೆದ ಮಹಿಳೆಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಈ ಸಂದರ್ಭ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯರಾದ ಎಂ.ಎನ್. ಚಂದ್ರಮೋಹನ್ ಮಾತನಾಡಿದರು. ಮಹಿಳಾ ಜ್ಞಾನವಿಕಾಸ ಸಮನ್ವಯಾಧಿಕಾರಿ ಸರಿತಾ ಮತ್ತು ಸೇವಾ ಪ್ರತಿನಿಧಿ ಮಂಜುಳಾ ಇದ್ದರು.ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿ: ವಿಠಲ ಸಾಲಿಯಾನ್
ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ವಿಠಲ ಸಾಲಿಯಾನ್ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.