ಸಾರಾಂಶ
ಹಾವೇರಿ: ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಒಳ್ಳೆಯ ವಾತಾವರಣ ಇರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಭಾನುವಾರ ಅಂತಾರಾಷ್ಟ್ರೀಯ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನಾ ದಿನದ ಅಂಗವಾಗಿ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯ ಮಹಿಳೆಯರ ಸುರಕ್ಷತೆಗಾಗಿ ಹಲವಾರು ನಿರ್ದೇಶನಗಳನ್ನು ನೀಡಿದೆ. ಮಹಿಳೆಯರು ಅವುಗಳ ಲಾಭ ಪಡೆದುಕೊಳ್ಳಬೇಕು. ಕಾನೂನು ನೆರವಿನ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಪೆನಲ್ ವಕೀಲರಾದ ಕೆ.ಜಿ. ಕಿತ್ತೂರ ಅವರು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಎಸ್.ಟಿ.ಎಸ್.ಸಿ.೧ ನಿಂಗೌಡ ಪಾಟೀಲ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್. ಮುತಾಲಿಕದೇಸಾಯಿ, ಸರ್ಕಾರಿ ಅಭಿಯೋಜಕಿ ಸರೋಜಾ ಕೂಡಲಗಿಮಠ, ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಇಂದುಮತಿ ಪಾಟೀಲ, ಜಿಲ್ಲಾ ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತ ಅಧಿಕಾರಿ ಸುದರ್ಶನ ಕುಲಕರ್ಣಿ ಇತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))