ಸಾರಾಂಶ
ನಲ್ ಜಲ್ ಯೋಜನೆಯಡಿ ತರಬೇತಿ ಪಡೆದ ಮಹಿಳೆಯರು ಅಧಿಕಾರಿಗಳ ಬಳಿ ಮಾರ್ಗದರ್ಶನ ಪಡೆದು ಸ್ವತಂತ್ರ್ಯವಾಗಿ ಸ್ವತಃ ನೀವೇ ಪ್ಲಂಬಿಂಗ್, ಎಲೆಕ್ಟ್ರಿಷಿಯನ್, ಮೇಸನ್ (ಮನೆ ಕಟ್ಟುವ ಕೆಲಸ) ನಿರ್ವಹಿಸಿ ಆರ್ಥಿಕ ಅಭಿವೃದ್ಧಿ ಕಾಣಬಹುದು. ಇಡೀ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಲ್ ಜಲ್ ಯೋಜನೆಯಡಿ ತರಬೇತಿ ಯಶಸ್ವಿಯಾಗಿ ನೀಡಲಾಗಿದೆ .
ಕನ್ನಡಪ್ರಭ ವಾರ್ತೆ ಮದ್ದೂರು
ನಲ್ ಜಲ್ ಯೋಜನೆಯಡಿ ರೂಪಿಸಿರುವ ನೀರು ವಿತರಣೆ ನಿರ್ವಹಣಾ ಕೆಲಸವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಕೆ.ಎಂ.ಉದಯ್ ತಿಳಿಸಿದರು.ಪಟ್ಟಣದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ರಾಜ್ಯ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಎನ್ ಆರ್ ಎಲ್ ಎಂ ಹಾಗೂ ಜಿಟಿಟಿಸಿ ಕಾಲೇಜು ಸಹಯೋಗದಲ್ಲಿ ನಡೆದ ಟೂಲ್ ಕಿಟ್ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಲ್ ಜಲ್ ಯೋಜನೆಯಡಿ ತರಬೇತಿ ಪಡೆದ ಮಹಿಳೆಯರು ಅಧಿಕಾರಿಗಳ ಬಳಿ ಮಾರ್ಗದರ್ಶನ ಪಡೆದು ಸ್ವತಂತ್ರ್ಯವಾಗಿ ಸ್ವತಃ ನೀವೇ ಪ್ಲಂಬಿಂಗ್, ಎಲೆಕ್ಟ್ರಿಷಿಯನ್, ಮೇಸನ್ (ಮನೆ ಕಟ್ಟುವ ಕೆಲಸ) ನಿರ್ವಹಿಸಿ ಆರ್ಥಿಕ ಅಭಿವೃದ್ಧಿ ಕಾಣಬಹುದು. ಇಡೀ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಲ್ ಜಲ್ ಯೋಜನೆಯಡಿ ತರಬೇತಿ ಯಶಸ್ವಿಯಾಗಿ ನೀಡಲಾಗಿದೆ ಎಂದು ಹೇಳಿದರು.ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಯಾವುದೇ ಕೆಲಸವನ್ನು ಹೆಣ್ಣುಮಕ್ಕಳು ಮಾಡಬಲ್ಲರು ಎಂಬ ಉದ್ದೇಶದಿಂದ ಸರ್ಕಾರ ಸ್ವ ಸಹಾಯ ಗುಂಪುಗಳ ಆಸಕ್ತ ಮಹಿಳೆಯರಿಗೆ ನಲ್ ಜಲ್ ತರಬೇತಿಯನ್ನು ಕೊಡಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ನಲ್ ಜಲ್ ಯೋಜನೆಯಡಿ ತರಬೇತಿ ಪಡೆದ ಮಹಿಳೆಯರು ‘ವಾಟರ್ ಗರ್ಲ್ಸ್ ಆಫ್ ಮದ್ದೂರು’ ಎಂದು ಕೀರ್ತಿ ಪಡೆಯಬೇಕು. ಹೆಣ್ಣು ಮಕ್ಕಳು ಯಾವುದೇ ಕೆಲಸವನ್ನು ಧೈರ್ಯದಿಂದ ಮಾಡಬಲ್ಲೆ ಎಂಬ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗಾನಂದ್ ಮಾತನಾಡಿ, ತರಬೇತಿಗೆ ಆಯ್ಕೆಯಾದ ಮಹಿಳೆಯರಿಗೆ 17 ದಿನಗಳ ಕಾಲ ಕೌಶಲ್ಯ ತರಬೇತಿ ನೀಡಲಾಗಿದೆ. ಪ್ರಸ್ತುತ ತಾಲೂಕಿನಲ್ಲಿ 47 ಮಹಿಳೆಯರಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಟೂಲ್ ಕಿಟ್ ಮತ್ತು ಪ್ರಮಾಣ ಪತ್ರ ನೀಡಲಾಯಿತು. ತಾಪಂ ಇಒ ರಾಮಲಿಂಗಯ್ಯ, ಜಿಟಿಟಿಸಿ ಪ್ರಾಂಶುಪಾಲ ಶಿವಕುಮಾರ್, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಮಧುಸೂದನ್ ಇದ್ದರು.