ಸಾರಾಂಶ
ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಎನ್ನುವುದು ಮರೀಚಿಕೆಯಾಗಿದ್ದ ಕಾಲದಲ್ಲಿ ಆ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಅಕ್ಷರ ಅಭ್ಯಾಸ ಮಾಡಿಸುವ ಮೂಲಕ ಅವರ ಬಾಳಿಗೆ ಬೆಳಕು ನೀಡುವ ಕಾರ್ಯ ಮಾಡಿದ್ದಾರೆ.
ಲಕ್ಷ್ಮೇಶ್ವರ: ಬ್ರಿಟೀಷರ ಕಾಲದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಸಿಗದಿರುವ ವೇಳೆಯಲ್ಲಿ ಗ್ರಾಮೀಣ ಭಾಗದ ಮಕ್ಕಳ ಹಾಗೂ ಮಹಿಳೆಯರ ಎದೆಯಲ್ಲಿ ಅಕ್ಷರದ ಬೀಜ ಬಿತ್ತಿದ ಕೀರ್ತಿ ಸಾವಿತ್ರಿಬಾಯಿ ಫುಲೆ ಅವರಿಗೆ ಸಲ್ಲುತ್ತದೆ ಎಂದು ಪಟ್ಟಣದ ಲಿಟಲ್ ಹಾರ್ಟ ಆಂಗ್ಲ ಮಾಧ್ಯಮ ಶಾಲೆಯ ಸದಸ್ಯ ರಾಜಶೇಖರ ಶಿರಹಟ್ಟಿ ಹೇಳಿದರು.
ಲಿಟಲ್ ಹಾರ್ಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಆಚರಿಸಿ ಮಾತನಾಡಿದರು.ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಎನ್ನುವುದು ಮರೀಚಿಕೆಯಾಗಿದ್ದ ಕಾಲದಲ್ಲಿ ಆ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಅಕ್ಷರ ಅಭ್ಯಾಸ ಮಾಡಿಸುವ ಮೂಲಕ ಅವರ ಬಾಳಿಗೆ ಬೆಳಕು ನೀಡುವ ಕಾರ್ಯ ಮಾಡಿದ್ದಾರೆ. ಹತ್ತು ಹಲವು ಅವಮಾನ, ನಿಂದನೆಗಳನ್ನು ಎದುರಿಸಿ ದೀನ ದಲಿತರ ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರಲ್ಲಿ ಅಕ್ಷರದ ಜ್ಞಾನ ಮೂಡಿಸಿದ್ದು ಸಣ್ಣ ಕಾರ್ಯವಲ್ಲ. ಆದಿವಾಸಿ ಜನರ ಗುಡಿಸಲಿನ ಸಾಮಾನ್ಯ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಶಿಕ್ಷಣವೆಂಬುದು ಮಾನವ ಕುಲವ ಬೆಳಗಿಸುವ ಜ್ಯೋತಿ ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ಈ ವೇಳೆ ಶಿಕ್ಷಕ ಮಾರುತಿ ಮ್ಯಾಗೇರಿ, ಪರಶುರಾಮ ಹುಡೇದ, ಈಶ್ವರ ದೊಡ್ಡಮನಿ, ಕಾಂತೇಶ ಮುದಗಲ್ಲ, ಮೇರಿ ಅಂಥೋನಿ, ಪೂರ್ಣಿಮಾ ಕೊಡ್ಲಿ, ಅಕ್ಷತಾ ಕೋರಿಶೆಟ್ಟರ, ನಿಖತ್ ಭದ್ರಾಪೂರ, ವಿಜಯಲಕ್ಷ್ಮೀ ಹಣಗಿ ಇದ್ದರು.