ಸಾರಾಂಶ
ವಿಜಯಪುರ: ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮಿಸಲಿರದೇ, ರಾಷ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕೃತಿಕ, ಆರ್ಥಿಕ ಅಥವಾ ರಾಜಕೀಯ ಕ್ಷೇತ್ರವಾಗಲಿ, ಎಲ್ಲದರಲ್ಲು ತಮ್ಮದೆ ಛಾಪು ಮೂಡಿಸಿದ್ದಾರೆ. ಮಹಿಳೆಯರ ಈ ಪ್ರಗತಿಯನ್ನ ಗುರುತಿಸಿ ಈ ದಿನವನ್ನು ಅವರಿಗೆ ಅರ್ಪಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗೀಯ ದಂಡಾಧಿಕಾರಿ ಶ್ವೇತಾ ಮೋಹನ ಬಿಡೀಕರ ಹೇಳಿದರು.

ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಮಹಿಳಾ ಸಬಲೀಕರಣ ಸಮಿತಿಯಿಂದ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ ಮನೆಯಿಂದ ಹೊರಬಂದು ಸಾಧನೆಯತ್ತ ದಾಪುಗಾಲಿಡುತ್ತಿರುವುದು ನಿಜಕ್ಕೂ ಶ್ಲ್ಯಾಘನೀಯ. ಇನ್ನಷ್ಟು ಮಹಿಳೆಯರು ಅಡುಗೆ ಮನೆಯಿಂದ ಹೊರ ಬರಬೇಕು. ಜಗತ್ತು ತುಂಬಾ ವಿಶಾಲವಾಗಿದೆ. ಎಲ್ಲ ಮಹಿಳೆಯರು ತಮ್ಮದೇ ವೈಶಿಷ್ಠತೆಯನ್ನು ಹೊಂದಿರುತ್ತಾರೆ. ಅದನ್ನು ಗುರುತಿಸಿಕೊಂಡು ಸಾಧಿಸಿ ಜಗತ್ತಿಗೆ ಮಾದರಿಯಾಗಬೇಕು ಎಂದರು.ವಿಜಯಪುರ ತಹಸೀಲ್ದಾರ ಕವಿತಾ ಆರ್.ಮಾತನಾಡಿ, ಮಹಿಳೆಯರ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಬೇಕು ಎಂದರು.
ಅಧ್ಯಕ್ಷತೆ ಪ್ರಾಚಾರ್ಯ ಎಸ್.ಎಸ್. ದೇಸಾಯಿ ವಹಿಸಿದ್ದರು. ಸುಸ್ಮಾ ದೇಸಾಯಿ, ಸರಸ್ವತಿ ಎಸ್.ನರಸಪ್ಪನ್ನವರ, ಸಾವಿತ್ರಿ ರಾ. ಸನದಿ ಮುಂತಾದವರು ಇದ್ದರು.