ಮಹಿಳೆಯರೇ ಪೋಷಕಾಂಶ ಆಹಾರ ಸೇವನೆಗೆ ಆದ್ಯತೆ ನೀಡಿ: ನ್ಯಾ.ಎಂ.ಎಸ್.ಹರಿಣಿ

| Published : Sep 29 2025, 01:03 AM IST

ಸಾರಾಂಶ

ಮನುಷ್ಯನ ದೇಹ ಆರೋಗ್ಯವಾಗಿರಲು ಶುದ್ಧ ಮತ್ತು ಪೌಷ್ಟಿಕ ಆಹಾರ ಸೇವನೆ ಮುಖ್ಯ. ಕಲುಷಿತ ಆಹಾರ ಸೇವನೆಯಿಂದ ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೊರಗಿನ ಜಂಕ್ ಫುಡ್ ತಿನ್ನುವುದನ್ನು ಬಿಟ್ಟು ಮನೆಯಲ್ಲೇ ತಯಾರು ಮಾಡುವ ಉತ್ತಮ ಆಹಾರ ಸೇವನೆ ತರಕಾರಿ ಮತ್ತು ಸೊಪ್ಪುಗಳನ್ನು ಸೇವಿಸುವುದರಿಂದ ಪೌಷ್ಟಿಕಾಂಶ ಪಡೆದುಕೊಳ್ಳಬಹುದು.

ಕನ್ನಡಪ್ರಭ ವಾರ್ತೆ ಮದ್ದೂರು

ಮಹಿಳೆಯರು ಪೋಷಕಾಂಶ ಆಹಾರ ಸೇವನೆಗೆ ಆದ್ಯತೆ ನೀಡಿ ಆರೋಗ್ಯ ಪೂರ್ಣ ಜೀವನ ನಡೆಸುವಂತೆ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಹರಿಣಿ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆ ಸಹ ಯೋಗದಲ್ಲಿ ನಡೆದ ವಿಶ್ವ ಪೌಷ್ಟಿಕಾಂಶ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮನುಷ್ಯನ ದೇಹ ಆರೋಗ್ಯವಾಗಿರಲು ಶುದ್ಧ ಮತ್ತು ಪೌಷ್ಟಿಕ ಆಹಾರ ಸೇವನೆ ಮುಖ್ಯ. ಕಲುಷಿತ ಆಹಾರ ಸೇವನೆಯಿಂದ ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದರು.

ಹೊರಗಿನ ಜಂಕ್ ಫುಡ್ ತಿನ್ನುವುದನ್ನು ಬಿಟ್ಟು ಮನೆಯಲ್ಲೇ ತಯಾರು ಮಾಡುವ ಉತ್ತಮ ಆಹಾರ ಸೇವನೆ ತರಕಾರಿ ಮತ್ತು ಸೊಪ್ಪುಗಳನ್ನು ಸೇವಿಸುವುದರಿಂದ ಪೌಷ್ಟಿಕಾಂಶ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.

1 ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಿ.ಎಂ.ಪಾರ್ವತಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಾಜ ಸೇವಾ ಸಂಸ್ಥೆ ಗಳ ಸಹಯೋಗದೊಂದಿಗೆ ಗ್ರಾಮೀಣ ಭಾಗದ ಜನರಲ್ಲಿ ಹಸಿವು ಮತ್ತು ಅಪೌಷ್ಟಿಕತೆ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಸುರಕ್ಷತೆ ಮತ್ತು ಆರೋಗ್ಯವಂತ ಜೀವನದ ಬಗ್ಗೆ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವಂತೆ ಕಿವಿಮಾತು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ಮಣಿ, ಉಚಿತ ಕಾನೂನು ಸಲಹೆಗಾರ ಎಸ್. ಜಯರಾಮು ಸಂಪನ್ಮೂಲ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಅರುಣ್ ಕುಮಾರ್, ವಕೀಲರ ಸಂಘದ ಕಾರ್ಯದರ್ಶಿ ಎಂ.ಜೆ.ಸುಮಂತ್, ಸಹಾಯಕಶಿಶು ಅಭಿವೃದ್ಧಿ ಯೋಜನಾಧಿಕಾರಿ ಪುಷ್ಪ ಸೊರಟೂರು, ಹಿರಿಯ ಮೇಲ್ವಿಚಾರಕಿ ಎಂ.ಕೆ.ಸುಜಾತ, ಮೇಲ್ವಿಚಾರಕಿ ಯರಾದ ಜಯಲಕ್ಷ್ಮಿ, ಭಾಗ್ಯ, ಆಸ್ಮಾ ಬಾನು, ಸುನಿತಾ, ಉಮಾ, ರಾಜೇಶ್ವರಿ, ನೇತ್ರ ಹಾಗೂ ಪೋಷಣ್ ಅಭಿಯಾನದ ಸಿಬ್ಬಂದಿ ಇದ್ದರು.