ಕುಟುಂಬದ ಆಧಾರಸ್ತಂಭವಾದ ಮಹಿಳೆಯರು ಸಂಕೋಚ ಮನಸ್ಥಿತಿ ಬಿಡಬೇಕು : ಶಾಸಕ ಪಿ.ಎಂ.ನರೇಂದ್ರಸ್ವಾಮಿ

| N/A | Published : Mar 09 2025, 01:52 AM IST / Updated: Mar 09 2025, 12:29 PM IST

ಕುಟುಂಬದ ಆಧಾರಸ್ತಂಭವಾದ ಮಹಿಳೆಯರು ಸಂಕೋಚ ಮನಸ್ಥಿತಿ ಬಿಡಬೇಕು : ಶಾಸಕ ಪಿ.ಎಂ.ನರೇಂದ್ರಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಕುಟುಂಬದ ಆಧಾರಸ್ತಂಭವಾದ ಮಹಿಳೆಯರು ಸಂಕೋಚ ಮನಸ್ಥಿತಿ ಬಿಟ್ಟು ಆರೋಗ್ಯದ ಕಡೆಗೆ ಹೆಚ್ಚು ಜಾಗೃತಿ ವಹಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

 ಮಳವಳ್ಳಿ : ಕುಟುಂಬದ ಆಧಾರಸ್ತಂಭವಾದ ಮಹಿಳೆಯರು ಸಂಕೋಚ ಮನಸ್ಥಿತಿ ಬಿಟ್ಟು ಆರೋಗ್ಯದ ಕಡೆಗೆ ಹೆಚ್ಚು ಜಾಗೃತಿ ವಹಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರ ಸಂಘ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ ಏಮ್ಸ್ ಬಿಜಿನಗರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮುಟ್ಟಿನ ನೈರ್ಮಲ್ಯ ಹಾಗೂ ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಮಹಿಳೆಯರು ಅರಿವಿನ ಕೊರತೆಯಿಂದ ರೋಗಕ್ಕೆ ತುತ್ತಾಗಿ ಬಳಲುತ್ತಿರುತ್ತಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ರೋಗಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ರೋಗ ಪತ್ತೆಗೆ ಪ್ರಮುಖ ಪಾತ್ರ ವಹಿಸಬೇಕು. ಸ್ಕ್ಯಾನಿಂಗ್ ಪರೀಕ್ಷೆ ಮಳವಳ್ಳಿಯಿಂದಲೇ ಆರಂಭಿಸುತ್ತಿರುವುದು ಉತ್ತಮ ಬೆಳೆವಣಿಗೆ. ತಾಲೂಕಿನ ಜನರು ಪ್ರಯೋಜನ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಮಹಿಳೆಯರಲ್ಲಿ ಹೆಚ್ಚಾಗಿ ಗರ್ಭಕಂಠದ ಕ್ಯಾನ್ಸರ್ ಕಂಡು ಬರುತ್ತಿದೆ. ತಕ್ಷಣದಲ್ಲಿಯೇ ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ಕೊಡಿಸಿಕೊಳ್ಳಬೇಕು. ಸರ್ಕಾರದ ವತಿಯಿಂದಲೇ ಎಚ್‌ಪಿವಿ ಲಸಿಕೆ ನೀಡಲಾಗುತ್ತಿರುವುದು ಮಹಿಳೆಯರಿಗೆ ಅನುಕೂಲವಾಗುತ್ತಿದೆ ಎಂದರು.

ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ಹಾಗೂ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ವೈದ್ಯರ ತಂಡ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ತಾಪಂ ಇಒ ಎಚ್.ಸಿ ಶ್ರೀನಿವಾಸ್, ತಾಲೂಕು ವೈದ್ಯಾಧಿಕಾರಿ ಡಾ. ವೀರಭದ್ರಪ್ಪ, ವೈದ್ಯಾಧಿಕಾರಿಗಳಾದ ಡಾ. ಮನೋಹರ್, ಡಾ. ಶಿಲ್ಪ, ಡಾ. ಉಮಾ, ಡಾ. ಲಕ್ಷ್ಮಿದೇವಿ, ಡಾ. ವಿನುತ, ಡಾ. ಶ್ರುತಿ, ಡಾ. ಶಿಲ್ಪ, ಡಾ. ಅನ್ನಪೂರ್ಣದೇವಿ, ಡಾ. ಜ್ಯೋತಿ ಜಯರಾಂ, ಸೇರಿದಂತೆ ಮಂಡ್ಯ ವೈದ್ಯಕೀಯ ಸ್ತ್ರೀ ರೋಗ ವಿಭಾಗದ ವೈದರು ಇದ್ದರು.