ಸಾರಾಂಶ
ಮಂಗಳೂರು : ಇದೇ ಮೊದಲ ಬಾರಿಗೆ ವಿಧಾನ ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಕಾಂಗ್ರೆಸ್ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಮತದಾರರನ್ನು ಯಶಸ್ವಿಯಾಗಿ ತಲುಪಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪದವೀಧರ ಹಾಗೂ ಶಿಕ್ಷಕ ಮತದಾರರ ಪೈಕಿ ಮಹಿಳೆಯರ ಸಂಖ್ಯೆ ಅಧಿಕವಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹೆಚ್ಚಿನ ಮಹಿಳಾ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆತಿದೆ. ಅವರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂದು ಭಂಡಾರಿ ತಿಳಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಎಂ.ಎ. ಗಫೂರ್, ಇನಾಯತ್ ಆಲಿ, ಲುಕ್ಮಾನ್ ಬಂಟ್ವಾಳ, ಅಶ್ವಿನ್ ಕುಮಾರ್ ರೈ, ಶುಭೋದಯ ಆಳ್ವ, ಎಂ.ಎಸ್. ಮುಹಮ್ಮದ್, ಕೃಷ್ಣಪ್ಪ ಸುಳ್ಯ, ಕಿಶನ್ ಹೆಗ್ಡೆ, ಸದಾಶಿವ ಉಳ್ಳಾಲ್, ಮಮತಾ ಗಟ್ಟಿ, ಶಾಲೆಟ್ ಪಿಂಟೊ ಇದ್ದರು.ಪೂಂಜರನ್ನು ಬಂಧಿಸಬೇಕಿತ್ತು: ಭಂಡಾರಿ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ. ಈ ವಿಚಾರದಲ್ಲಿ ಪೊಲೀಸರು ಪೂಂಜರ ಬಗ್ಗೆ ಮೃಧುಧೋರಣೆ ತಳೆದಿದ್ದು, ಅವರನ್ನು ಆ ದಿನವೇ ಬಂಧಿಸಬೇಕಿತ್ತು. ಶಾಸಕರಾದವರು ಜವಾಬ್ದಾರಿಯಿಂದ ಮಾತನಾಡಬೇಕು. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಂಜುನಾಥ ಭಂಡಾರಿ ಹೇಳಿದರು.
ಜಿಲ್ಲೆಯ ಅಕ್ರಮ ಮರಳುಗಾರಿಕೆ ಬಗ್ಗೆ ಪ್ರತಿಕ್ರಿಯಿಸಿ, ಜೂ.7ರಂದು ವಿಧಾನಸಭಾ ಸ್ಪೀಕರ್ ಅವರು ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ ಎಂದರು.x