ಭಾರತೀಯ ಸಂಸ್ಕೃತಿಗೆ ಮಹಿಳೆಯರ ಕೊಡುಗೆ ಅನನ್ಯ

| Published : Mar 09 2025, 01:49 AM IST

ಸಾರಾಂಶ

ಭಾರತೀಯ ಸಂಸ್ಕೃತಿಗೆ ಮಹಿಳೆಯರ ಕೊಡುಗೆ ಅನನ್ಯ.

ಯಲ್ಲಾಪುರ: ಇಂದಿನ ಮಹಿಳೆಯರು ತಮ್ಮ ಆತ್ಮಸ್ಥೈರ್ಯ ಹೆಚ್ಚಿಸಿಕೊಂಡು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಬೇಕಾದ ಅಗತ್ಯವಿದೆ ಎಂದು ಸಂಗೀತ ಶಿಕ್ಷಕಿ ವಾಣಿ ಹೆಗಡೆ ಹೇಳಿದರು.ಪಟ್ಟಣದ ಸ.ಪ್ರ.ದ. ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜಿನ ಮಹಿಳಾ ವೇದಿಕೆಯ ಸಂಚಾಲಕಿ ಸವಿತಾ ನಾಯ್ಕ ಮಾತನಾಡಿ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಸ್ತುತತೆ ಮತ್ತು ಇತಿಹಾಸದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಮತ್ತೋರ್ವ ಅತಿಥಿಗಳಾಗಿದ್ದ ತಾಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ ಭಟ್ಟ ಮಾತನಾಡಿ, ಭಾರತೀಯ ಸಂಸ್ಕೃತಿಗೆ ಮಹಿಳೆಯರ ಕೊಡುಗೆ ಅನನ್ಯ. ಸಮಾಜದ ಎಲ್ಲ ಕ್ಷೇತ್ರದಲ್ಲಿ ಆಕೆ ಪ್ರಗತಿ ಸಾಧಿಸುತ್ತಾ ತನ್ನ ಕೌಟುಂಬಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮತೋಲನ ಕಂಡುಕೊಳ್ಳುವ ಮೂಲಕ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿರುತ್ತಾಳೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಆರ್.ಡಿ. ಜನಾರ್ದನ ಮಾತನಾಡಿ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಮಹತ್ವವನ್ನು ಉದಾಹರಣೆಗಳ ಮೂಲಕ ವಿವರಿಸಿದರು.

ಮಹಿಳಾ ದಿನಾಚರಣೆಯ ಅಂಗವಾಗಿ ಉಪನ್ಯಾಸಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಿವೇದಿತಾ ರಾಣಿಬೆನ್ನೂರ್ ಪ್ರಾರ್ಥಿಸಿದರು. ಸಕೀನಾ ಶೇಖ್ ಸ್ವಾಗತಿಸಿದರು. ವೇದಾ ಭಟ್ಟ ನಿರ್ವಹಿಸಿದರು. ವೈಶಾಲಿ ದೇವಳಿ ವಂದಿಸಿದರು.

ಸ.ಪ್ರ.ದ.ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.